ಬಂಟ್ವಾಳ ತಾಲೂಕು ಬಂಟರ ಸಂಘದ ವಾರ್ಷಿಕೋತ್ಸವ, ಸಾಂಸ್ಕೃತಿಕ ವೈಭವ
ಬಂಟ್ವಾಳ: ಬಂಟ್ವಾಳ ತಾಲೂಕು ಬಂಟರ ಸಂಘದ ನೇತೃತ್ವದಲ್ಲಿ ಮಹಿಳಾ ವಿಭಾಗ, ಯುವ ವಿಭಾಗ ಹಾಗೂ ವಲಯ ಬಂಟರ ಸಂಘಗಳ ಸಹಯೋಗದಲ್ಲಿ ಸಂಘದ ವಾರ್ಷಿಕೋತ್ಸವವು ಸಾಂಸ್ಕೃತಿಕ ವೈಭವದೊಂದಿಗೆ ಬಂಟವಾಳದ ಬಂಟರ ಭವನದಲ್ಲಿ ನಡೆಯಿತು.

“ಬಂಟೆರೆ ಕಲಾ ಪಂಥ”ವನ್ನು ಮಂಗಳೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ನಿಟ್ಟೆಗುತ್ತು ರವಿರಾಜ್ ಶೆಟ್ಟಿ ಅವರು ಉದ್ಘಾಟಿಸಿ ಶುಭಹಾರೈಸಿದರು.

ಮಧ್ಯಾಹ್ನ ನಡೆದ ಸಭಾಕಾರ್ಯಕ್ರಮದಲ್ಲಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಎಂ.ಮೋಹನ್ ಆಳ್ವ ಹಾಗೂ ಆಲ್‌ಕಾರ್ಗೊ ಲಾಜಿಸ್ಟಿಕ್ಟ್ ಸಿಎಂಡಿ ಡಾ| ಶಶಿಕಿರಣ್ ಶೆಟ್ಟಿ ಅವರ ಪರವಾಗಿ ತಾಯಿ ಸುಶೀಲ ಜನಾರ್ದನ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬೆಂಗಳೂರಿನ ಉದ್ಯಮಿ ರವಿಶಂಕರ್ ಶೆಟ್ಟಿ ಬಡಾಜೆ, ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಜಿಲ್ಲಾಧ್ಯಕ್ಷ ಶಾಂತರಾಮ ಶೆಟ್ಟಿ ಶುಭಹಾರೈಸಿದರು.ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಡಿ.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಕದ್ರಿ ನವನೀತ್ ಶೆಟ್ಟಿ ಸನ್ಮಾನ ಕಾರ್ಯ ನಿರ್ವಹಿಸಿದರು. ಖ್ಯಾತ ಭಾಗವತರಾದ ಪಟ್ಲ ಸತೀಶ್ ಶೆಟ್ಟಿ ಅವರು ಭಾಗವತಿಕೆಯೊಂದಿಗೆ ಸಮ್ಮಾನಿತರನ್ನು ಪರಿಚಯಿಸಿದರು.
ಸಂಘದ ಕೋಶಾಧಿಕಾರಿ ಲೋಕೇಶ್ ಶೆಟ್ಟಿ ಕೆ, ಜತೆ ಕಾರ್ಯದರ್ಶಿ ರಂಜನ್‌ಕುಮಾರ್ ಶೆಟ್ಟಿ ಅರಳ, ಜತೆ ಕೋಶಾಧಿಕಾರಿ ಪ್ರತಿಭಾ ಎ.ರೈ, ಮಹಿಳಾ ವಿಭಾಗದ ಅಧ್ಯಕ್ಷೆ ರಮಾ ಎಸ್.ಭಂಡಾರಿ, ಯುವ ವಿಭಾಗದ ಅಧ್ಯಕ್ಷ ನಿಶಾನ್ ಆಳ್ವ, ಸಾಂಸ್ಕೃತಿಕ ಸಮಿತಿಯ ಸಂಚಾಲಕ ಪ್ರಕಾಶ್ ಶೆಟ್ಟಿ ತುಂಬೆ, ವಿವಿಧ ವಲಯಗಳ ಅಧ್ಯಕ್ಷರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಘದ ಕಾರ್ಯದರ್ಶಿ ಜಗನ್ನಾಥ ಚೌಟ ಬದಿಗುಡ್ಡೆ ಪ್ರಸ್ತಾವಿಕವಾಗಿ ಮಾತನಾಡಿದರು.ಸಂಘದ ಉಪಾಧ್ಯಕ್ಷ ಡಾ. ಪ್ರಶಾಂತ್ ಮಾರ್ಲ ಸ್ವಾಗತಿಸಿದರು. ಚಂದ್ರಹಾಸ ರೈ ಬಾಲಾಜಿಬೈಲು ವಂದಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ಹಾಗೂ ವಿಂಧ್ಯಾ ರೈ ಕಾರ್ಯಕ್ರಮ ನಿರ್ವಹಿಸಿದರು.