ಉಳ್ಳಾಲ ಮತ್ತು ಬಂಟ್ವಾಳ ತಾಲೂಕಿನ 7 ಗ್ರಾಮ ಪಂಚಾಯತ್ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಪ್ರಗತಿ ಪರಿಶೀಲನಾ ಸಭೆ
ಬಂಟ್ವಾಳ:ಉಳ್ಳಾಲ ತಾಲೂಕು ಮತ್ತು ಬಂಟ್ವಾಳ ತಾಲೂಕಿನ 7 ಗ್ರಾಮ ಪಂಚಾಯತ್ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಪ್ರಗತಿ ಪರಿಶೀಲನಾ ಸಭೆಯು ಬಂಟ್ವಾಳ ತಾ.ಪಂ.ನ ಎಸ್ ಜಿಎಸ್ ವೈ ಸಭಾಂಗಣದಲ್ಲಿ ಬುಧವಾರ ನಡೆಯಿತು.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಯೋಜನಾ ನಿರ್ದೇಶಕರಾದ ಕೆ.ಇ.ಜಯರಾಮ್ ರವರು ಅಧ್ಯಕ್ಷತೆ ವಹಿಸಿದ್ದರು.
ಬಂಟ್ವಾಳ ತಾಲೂಕು ಪಂಚಾಯತ್ ನ ಸಹಾಯಕ ನಿರ್ದೇಶಕರಾದ ವಿಶ್ವನಾಥ್ ಬೈಲಾಮೂಲೆ ರವರು ಮಾತನಾಡಿ,ಪಂಚಾಯತ್ ಮಟ್ಟದಲ್ಲಿ ತ್ಯಾಜ್ಯ ವಿಲೇವಾರಿಯ ಜವಾಬ್ದಾರಿ ಒಕ್ಕೂಟದಾಗಿದ್ದು,ಎಲ್ಲಾ ಪಂಚಾಯತ್ ಗಳಲ್ಲೂ ಸರಕಾರದ ನಿರ್ದೇಶನದನ್ವಯ ಒಕ್ಕೂಟದ ಸಿಬ್ಬಂದಿಗಳೇ ತ್ಯಾಜ್ಯ ವಿಲೇವಾರಿಯ ಕಾರ್ಯ ನಿರ್ವಹಿಸಬೇಕು.ಇದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆ ಗಳನ್ನು ಪಂಚಾಯತ್ ವತಿಯಿಂದ ಒದಗಿಸಲಾಗುವುದು ಎಂದು ತಿಳಿಸಿದರು. ಉದ್ಯೋಗ ಖಾತರಿ ಯೋಜನೆಯ ಒಗ್ಗೂಡಿಸುವಿಕೆಯೊಂದಿಗೆ ಪ್ರತಿಯೊಂದು ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 75 ಕೃಷಿ ಪೌಷ್ಟಿಕ ತೋಟ ರಚನೆ ಮಾಡಬೇಕಿದ್ದು, ಒಕ್ಕೂಟದ ಮೂಲಕ ಫಲಾನುಭವಿಗಳ ಆಯ್ಕೆ ಮಾಡಬೇಕೆಂದು ತಿಳಿಸಿದರು.
ಉದ್ಯೋಗ ಖಾತರಿ ಯೋಜನೆಯ ಬಂಟ್ವಾಳ ತಾಲೂಕು ಐ ಇ ಸಿ ಸಂಯೋಜಕ ರಾಜೇಶ್ ರವರು ಕೃಷಿ ಪೌಷ್ಟಿಕ ತೋಟ ರಚನೆಯ ತಾಂತ್ರಿಕ ವಿಷಯದ ಬಗ್ಗೆ ಮಾಹಿತಿ ನೀಡಿದರು.
ಸಂಜೀವಿನಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಹರಿಪ್ರಸಾದ್, ಲೋಕೋಸ್ ನ ಪ್ರಗತಿ, ಸಮುದಾಯ ಬಂಡವಾಳ ನಿಧಿ ವಿತರಣೆ, ಕೃಷಿ ಮತ್ತು ಕೃಷಿಯೇತರ ಜೀವನೋಪಾಯ ಚಟುವಟಿಕೆ, ಕೃಷಿಯೇತರ ಚಟುವಟಿಕೆ ಪ್ರಮಾಣ ಪತ್ರ, ಬ್ಯಾಂಕ್ ಸಂಪರ್ಕ, ಸಾಮಾಜಿಕ ವಿಮೆ, ಗುಂಪು ಉದ್ಯಮ, ಉತ್ಪಾದಕರ ಗುಂಪು,ಲೆಕ್ಕ ಪರಿಶೋಧನೆ,2024-25 ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಲಾಯಿತು.
ತಾಲೂಕು ಪಂಚಾಯತ್ ವ್ಯವಸ್ಥಾಪಕರಾದ ಪ್ರಕಾಶ್, ಸಂಜೀವಿನಿ ಜಿಲ್ಲಾ ವ್ಯವಸ್ಥಾಪಕಿ ವಾಣಿಶ್ರೀ,ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಸುಧಾ, ವಲಯ ಮೇಲ್ವಿಚಾರಕರಾದ ಕುಶಾಲಪ್ಪ ಗೌಡ, ಕು.ಪ್ರೀತಿಕಾ ಸಭೆಯಲ್ಲಿ ಉಪಸ್ಥಿತರಿದ್ದರು. ಸಂಜೀವಿನಿ ಬಂಟ್ವಾಳ ತಾಲೂಕು ವ್ಯವಸ್ಥಾಪಕರಾದ ಪ್ರದೀಪ್ ಕಾಮತ್ ಸ್ವಾಗತಿಸಿ,ವಲಯ ಮೇಲ್ವಿಚಾರಕಿ ಕುಸುಮರವರು ವಂದಿಸಿದರು.