ಪಿಲಾತಬೆಟ್ಟು ಪಾ.ಕೃ.ಸ.ಸಂಘ ಸಿಬಂದಿ ತರಬೇತಿ ಕಾರ್ಯಕ್ರಮ
ಬಂಟ್ವಾಳ: ತಾಲೂಕಿನ ಪುಂಜಾಲಕಟ್ಟೆ ಪಿಲಾತಬೆಟ್ಟು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಸಿಬಂದಿಗೆ ವ್ಯಕ್ತಿತ್ವ ವಿಕಸನ ಬಗ್ಗೆ ತರಬೇತಿ ಕಾರ್ಯಕ್ರಮವು ಸಂಘದ ಸಭಾಭವನದಲ್ಲಿ ನಡೆಯಿತು.
ಮಂಗಳೂರು ಮಾಸ್ಟರ್‌ಮೈಂಡ್ ಎಂಟರ್‌ಪ್ರೈಸಸ್‌ನ ಶ್ರೀಶ ಕೆ.ಎಂ.ಅವರು ಕಾರ್ಯಕ್ರಮ ಉದ್ಘಾಟಿಸಿ ತರಬೇತಿ ನೀಡಿದರು. ಸಂಘದ ಅಧ್ಯಕ್ಷ ಎಂ.ತುಂಗಪ್ಪ ಬಂಗೇರ, ಉಪಾಧ್ಯಕ್ಷ ರವಿಶಂಕರ ಹೊಳ್ಳ, ನಿರ್ದೇಶಕರಾದ ಚಂದ್ರಶೇಖರ ಶೆಟ್ಟಿ, ಸುಂದರ ನಾಯ್ಕ, ಶಶಿಧರ ನಾಯ್ಕ, ಪ್ರಭಾಕರ ಪಿ.ಎಂ., ಪ್ರಭಾರ ಮುಖ್ಯ ಕಾರ್ಯ ನಿರ್ವಹಣಾಽಕಾರಿ ಬಬಿತಾ ಡಿ.ಹಾಗೂ ಕೇಂದ್ರ ಕಚೇರಿ ಮತ್ತು ವಿವಿಧ ಶಾಖಾ ಸಿಬಂದಿ ವರ್ಗ ಉಪಸ್ಥಿತರಿದ್ದರು.