ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮನ್ವಯ ಸಮಿತಿ ಅಂಗನವಾಡಿ ಕೇಂದ್ರ ಕಶೆಕೋಡಿ ಇವರ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ಕಶೆಕೋಡಿ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.
ಈ ಸಂದರ್ಭ ಸಿಡಿಪಿಒ ಮೇಲ್ವಿಚಾರಕಿ ಗಾಯತ್ರಿ ಕಂಬಳಿ, ಜನಶಿಕ್ಷಣ ಟ್ರಸ್ಟಿಗಳಾದ ಶೀನ ಶೆಟ್ಟಿ, ಕೃಷ್ಣ ಮೂಲ್ಯ, ಅಮ್ಟಾಡಿ ಗ್ರಾ.ಪಂ, ಸದಸ್ಯೆ ಮಲ್ಲಿಕಾ ಶೆಟ್ಟಿ, ಆರೋಗ್ಯ ಕಾರ್ಯಕರ್ತೆ ಜ್ಯೋತಿ, ಅಂಗನವಾಡಿ ಕಾರ್ಯಕರ್ತೆ ಫ್ಲೋವಿ ಡಿ’ಸೋಜಾ ಮತ್ತಿತರರು ಉಪಸ್ಥಿತರಿದ್ದರು.

