ಬಂಟ್ವಾಳ: ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ
ಬಂಟ್ವಾಳ : ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯನ್ನು ಬುಧವಾರ ಬಂಟ್ವಾಳ ಆಡಳಿತ ಸೌಧದಲ್ಲಿ ಆಚರಿಸಲಾಯಿತು. ತಾಲೂಕು ಕಚೇರಿಯ ಸಿಬ್ಬಂದಿಗಳಿಗೆ ತಹಶೀಲ್ದಾರ್ ಡಿ.ಅರ್ಚನಾ ಭಟ್ ಅವರು ತಾಲೂಕು ಕಚೇರಿಯ ಸಿಬ್ಬಂದಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ,ಸಮಾಜದಲ್ಲಿ ಬಾಲಕಾರ್ಮಿಕರು ಅಥವಾ ಕಿಶೋರ ಕಾರ್ಮಿಕರು ಕಂಡು ಬಂದಲ್ಲಿ ಅವರ ರಕ್ಷಣೆಗೆ ಮುಂದಾಗಬೇಕು, ಮಕ್ಕಳನ್ನು ತೊಡಗಿಸಿಕೊಂಡವರು ಮತ್ತು ಮಕ್ಕಳ ಪೋಷಕರಿಗೆ ಅಗತ್ಯ ತಿಳುವಳಿಕೆ ನೀಡಿ ಮಕ್ಕಳನ್ನು ರಕ್ಷಿಸಬೇಕು ಮಕ್ಕಳ ರಕ್ಷಣೆ ಕುರಿತಾಗಿ ಎಲ್ಲರೂ ಜಾಗೃತರಾಗಿರಬೇಕೆಂದರು.
ಉಪತಹಶೀಲ್ದಾರರಾದ ದಿವಾಕರ್, ನರೇಂದ್ರನಾಥ ಮಿತ್ತೂರು, ಕಂದಾಯ ನಿರೀಕ್ಷಕರಾದ ಜನಾರ್ಧನ್ , ವಿಜಯ್ , ಗ್ರಾಮ ಆಡಳಿತಾಧಿಕಾರಿಗಳು, ಗ್ರಾಮಸಹಾಯಕರು, ತಾಲೂಕು ಕಛೇರಿ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.