ಒಡ್ಡೂರು ಫಾರ್ಮ್ಸ್ ಹೌಸ್ ಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ
ಬಂಟ್ವಾಳ:ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಬುಧವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ಒಡ್ಡೂರು ಫಾರ್ಮ್ಸ್ ಹೌಸ್ ಗೆ ಭೇಟಿ ನೀಡಿದರು.
ಈ ಸಂದರ್ಭ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ನೂತನ ದ.ಕ ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಶಾಸಕ ರಾಜೇಶ್ ನಾಯ್ಕ್ ಅವರು ಶಾಲು ಹಾಕಿ ಸ್ಮರಣಿಕೆಯನ್ನಿತ್ತು ಅಭಿನಂದಿಸಿದರು.
ಶಾಸಕ ರಾಜೇಶ್ ನಾಯ್ಕ್ ಅವರ ಕೃಷಿ ಚಟುವಟಿಕೆಯನ್ನು ವೀಕ್ಷಿಸಿದ ಆರ್ .ಆಶೋಕ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.ಶಾಸಕರುಗಳಾದ ಡಾ.ಭರತ್ ಶೆಟ್ಟಿ,ವೇದವ್ಯಾಸ್ ಕಾಮತ್,ಹರೀಶ್ ಪೂಂಜಾ, ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ,ಪಕ್ಷದ ಪ್ರಮುಖರಾದ ಹರಿಕೃಷ್ಣ ಬಂಟ್ವಾಳ,ಸಂಜಯ್ ಪ್ರಭು,ಪುರುಷೋತ್ತಮ ಶೆಟ್ಟಿ ಹಾಗೂ ಪಕ್ಷದ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.