ಬಂಟ್ವಾಳ: 2024-25 ನೇ ಸಾಲಿನ ಮುಂಗಾರು ಹಂಗಾಮಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಅನುಷ್ಠಾನಕ್ಕೆ ತರುವಂತೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ‌ ಸಂಘದ ನಿಯಮಿತದ ಅಧ್ಯಕ್ಷ ಪ್ರಭಾಕರ ಪ್ರಭು ಅವರು ಕರ್ನಾಟಕ ಸರಕಾರದ ತೋಟಗಾರಿಕ‌ ಸಚಿವರಿಗೆ ಮನವಿ ಮೂಲಕ ಒತ್ತಾಯಿಸಿದ್ದಾರೆ.


ಕೇಂದ್ರ ಸರಕಾರ ಜಾರಿಗೊಳಿಸಿರುವ ರಾಜ್ಯ ಸರಕಾರದ ಸಹಬಾಗಿತ್ವದ ಮಹತ್ವಾಕಾಂಕ್ಷಿ ಯೋಜನೆಯಾದ  ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿಯಲ್ಲಿ ಕರಾವಳಿಯ ಬಹುತೇಕ ಅಡಿಕೆ  ಹಾಗೂ ಕರಿಮೆಣಸು ಬೆಳೆಗಾರರಿಗೆ ಹವಾಮಾನ ವೈಪರೀತ್ಯದಿಂದಾಗಿ ನಷ್ಟ ಸಂಭವಿಸಿದ ಸಂದರ್ಭದಲ್ಲಿ ರೈತರ ಬಾಳಿನಲ್ಲಿ ಬೆಳಕು ಚೆಲ್ಲುವ ಯೋಜನೆಯಾಗಿದ್ದು, ವರ್ಷಂಪ್ರತಿ ಸಾವಿರಾರು ರೂ. ರೈತರಿಗೆ ಬೆಳೆ ವಿಮೆ ಪರಿಹಾರ ಮೊತ್ತ ಬಿಡುಗಡೆಯಾಗುತ್ತಿದ್ದು, 2024-25 ನೇ ಸಾಲಿನಲ್ಲಿ ಮುಂಗಾರು ಹಂಗಾಮಿಗೆ ಈ ಯೋಜನೆಯನ್ನು  ಶೀಘ್ರವಾಗಿ ಅನುಷ್ಟಾನಗೊಳಿಸುವಂತೆ ಅವರು ಮನವಿಯಲ್ಲಿ ಆಗ್ರಹಿಸಿದ್ದಾರೆ.


ಈ ಯೋಜನೆಯಡಿ  ನೋಂದಣೆಗಾಗಿ ರೈತರಿಗೆ 60 ದಿನಗಳ ಕಾಲಾವಕಾಶ ನೀಡಬೇಕಾಗುತ್ತದೆ. ಇದರಿಂದಾಗಿ ಸ್ಥಳೀಯ ಪ್ರಾಥಮಿಕ ಸಹಕಾರ ಸಂಘಗಳಿಗೆ ಹೆಚ್ಚಿನ ರೈತರನ್ನು ಈ ಯೋಜನೆಗೆ ಒಳಪಡಿಸಲು ಅನೂಕೂಲವಾಗುತ್ತದೆ.

ಈ ಯೋಜನೆ ಸಂಬಂಧ ರೈತರು  ದಿನಂಪ್ರತಿ ಪ್ರಾಥಮಿಕ ಸಹಕಾರ ಸಂಘಗಳ ಕಛೇರಿಗಳಿಗೆ ಸಂಪರ್ಕಿಸಿ ಬೆಳೆ ವಿಮೆ ಕಂತು ಪಾವತಿಸುವ ಬಗ್ಗೆ ವಿಚಾರಿಸುತ್ತಿದ್ದು,ಈ ಹಿನ್ನಲೆಯಲ್ಲಿ ರೈತರಿಗೆ ಅನುಕೂಲವಾಗಿರುವ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ಸಂಬಂಧಿಸಿ ಶೀಘ್ರವಾಗಿ ಅನುಷ್ಠಾನಗೊಳಿಸಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಪ್ರಭು ರೋಟಗಾರಿಕಾ ಸಚಿವರನ್ನು ಮನವಿಯಲ್ಲಿ ಕೋರಿದ್ದಾರೆ.

By suddi9

Leave a Reply

Your email address will not be published. Required fields are marked *