ಬಂಟ್ವಾಳ : ಯಕ್ಷ ಧ್ರುವ ಪಟ್ಲ ಫೌಂಡೇಶನ್ ಇದರ ಯಕ್ಷ ಶಿಕ್ಷಣಕ್ಕೆ ಶನಿವಾರ ಬಂಟ್ವಾಳ ತಾಲೂಕಿನ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆಯಲ್ಲಿ ಚಾಲನೆ ನೀಡಲಾಯಿತು.


ಯಕ್ಷ ಧ್ರುವ ಪಟ್ಲ ಫೌಂಡೇಶನ್ ನ ಬಂಟ್ವಾಳ ಘಟಕದ ಅಧ್ಯಕ್ಷರಾದ ಚಂದ್ರಹಾಸ್ ಶೆಟ್ಟಿ ಯವರು ದೀಪ ಬೆಳಗಿಸಿ  ಉದ್ಘಾಟಿಸಿ ಶುಭ ಹಾರೈಸಿದರು.


ಯಕ್ಷ ಶಿಕ್ಷಣದ ಪ್ರಧಾನ ಸಂಚಾಲಕರಾದ ಪಣಂಬೂರು ವಾಸುದೇವ ಐತಾಳ್, ಯಕ್ಷಗಾನ ಕಲಾವಿದ ಸರಪಾಡಿ ಅಶೋಕ್ ಶೆಟ್ಟಿ, ಯಕ್ಷ ಗುರುಗಳಾದ ಓಂ ಪ್ರಕಾಶ್, ಘಟಕದ ಪ್ರಧಾನ ಕಾರ್ಯದರ್ಶಿ ದೇವದಾಸ್ ಶೆಟ್ಟಿ,ಶಾಲಾ ಮುಖ್ಯೋಪಾಧ್ಯಯರಾದ ಕಮಲಾಕ್ಷ,  ಶಿಕ್ಷಕ ದೇವದಾಸ್ ಮತ್ತಿತರರು ಉಪಸ್ಥಿತರಿದ್ದರು. 

By suddi9

Leave a Reply

Your email address will not be published. Required fields are marked *