ವಿ. ಹಿಂ. ಪ. ನ ಕೇಂದ್ರೀಯ ಸಹ ಪ್ರಧಾನ ಕಾರ್ಯದರ್ಶಿ ಒಡ್ಡೂರು ಫಾಮ್೯ಗೆ ಭೇಟಿ
ಬಂಟ್ವಾಳ: ವಿಶ್ವ ಹಿಂದೂ ಪರಿಷತ್ ನ ಕೇಂದ್ರೀಯ ಸಹ ಪ್ರಧಾನ ಕಾರ್ಯದರ್ಶಿ ಸ್ಥಾನು ಮಲಯನ್ ಅವರು ಗಂಜಿಮಠದಲ್ಲಿರುವ ಒಡ್ಡೂರು ಫಾರ್ಮ್ಸ್ ಗೆ ಭೇಟಿ ನೀಡಿದರು.

ಈ ಸಂದರ್ಭ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಸ್ಥಾನುಬಮಲಯನ್ ಅವರಿಗೆ ಗೋವು ಆಧಾರಿತ ಕೃಷಿ ಚಟುವಟಿಕೆ ಬಗ್ಗೆ ಮಾಹಿತಿ ನೀಡಿದರು.

ವಿ.ಹಿಂ.ಪ.ನ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಸೇರಿದಂತೆ ವಿಹಿಂಪ, ಭಜರಂಗದಳದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.