ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಶಾಸಕ ನಾಯ್ಕ್ ಖಂಡನೆ
ಬಂಟ್ವಾಳ : ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಏಕಾಏಕಿ ಶೇ.4ರಷ್ಟು ಹೆಚ್ಚಿಸುವ ಮೂಲಕ ಜನರ ಮೇಲೆ ಬರೆ ಎಳೆದಿರುವ ರಾಜ್ಯ ಸರಕಾರದ ನೀತಿಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಖಂಡಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ಮತ್ತೆ ಪ್ರದರ್ಶಿಸಿದೆ ಎಂದು ಆರೋಪಿಸಿರುವ ಶಾಸಕರು ಗ್ಯಾರಂಟಿ ಯೋಜನೆಯ ಮೂಲಕ ಜನರಿಗೆ ಮೋಸ ಮಾಡಿ ಅಧಿಕಾರ ಪಡೆದ ಕಾಂಗ್ರೆಸ್ ಸರಕಾರದ ಬೊಕ್ಕಸ ಖಾಲಿಯಾಗಿದ್ದು ಈಗ ತೆರಿಗೆ ಹೆಚ್ಳಳ ಮಾಡುವ ಮೂಲಕ ಜನತೆಗೆ ಶಾಕ್ ನೀಡಿದೆ ಎಂದು ಟೀಕಾ ಪ್ರಹಾರಗೈದಿದ್ದಾರೆ
ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಎಲ್ಲದರ ಮೇಲು ತೆರಿಗೆ ಹೆಚ್ಚಿಸಿದ್ದು, ಉಚಿತದ ಹೆಸರಿನಲ್ಲಿ ರಾಜ್ಯದ ಜನರಿಗೆ ಹೊರೆಯಾಗುವಂತೆ ಶುಲ್ಕಗಳನ್ನು ಹೆಚ್ಚಿಸಿ ಮೋಸ ಮಾಡಿದೆಯಲ್ಲದೆ ಕಾನುಇನು ಸುವ್ಯವಸ್ಥೆ ಕೂಡ ಹದಗೆಟ್ಟಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಿಸಿರುವುದರಿಂದ ಜನರ ದಿನಬಳಕೆ ವಸ್ತುಗಳ ಮೇಲಿನ ದರ ದುಪ್ಪಟ್ಟು ಆಗಲಿದೆ ಪರಿಣಾಮ ಜನರ ಜನಜೀವನಕ್ಕೆ ತೊಂದರೆಯಾಗಲಿದೆ ಎಂದು ಅವರು ಪ್ರಕಟಣೆಯಲ್ಲಿತಿಳಿಸಿದ್ದಾರೆ.