ಜೂ.20 ರಂದು ಬಿ.ಸಿ.ರೋಡಿನಲ್ಲಿ ಬಿಜೆಪಿಯಿಂದ ಪ್ರತಿಭಟನೆ
ಬಂಟ್ಚಾಳ: ಬಿಜೆಪಿ ಬಂಟ್ವಾಳ ಮಂಡಲದ ಪ್ರಮುಖರ ಸಭೆ ಬಿ.ಸಿ ರೋಡ್ ನ ಪಕ್ಷದ ಕಛೇರಿಯಲ್ಲಿ ಸೋಮವಾರ ನಡೆಯಿತು.ಪೆಟ್ರೋಲ್,ಡೀಸೆಲ್ ಬೆಲೆ ಏರಿಸಿದ ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ಸಭೆ ಖಂಡಿಸಿತಲ್ಲದೆ ಇದರ ವಿರುದ್ಧ ಜೂ. 20ರಂದು ಬಿ.ಸಿ ರೋಡ್ ನಲ್ಲಿ ಬೃಹತ್ ಪ್ರತಿಭಟನೆಗೆ ತೀರ್ಮಾನಿಸಲಾಯಿತು.
ಇದಕ್ಕು ಮೊದಲು ಸೋಮವಾರ ನಿಧನರಾದ ಲೋಕಸಭಾ ಕ್ಲಸ್ಟರ್ ಸಂಚಾಲಕರು, ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಹಿರಿಯ ಬಿಜೆಪಿ ನಾಯಕರಾದ ಭಾನುಪ್ರಕಾಶ್ ಅವರಿಗೆ ಮೌನ ಪ್ರಾರ್ಥನೆ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷರಾದ ಚೆನ್ನಪ್ಪ ಆರ್ .ಕೋಟ್ಯಾನ್ ಸಭಾಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಂಡಲದ ಪ್ರ.ಕಾರ್ಯದರ್ಶಿಗಳಾದ ಡೊಂಬಯ ಅರಳ,ರವೀಶ್ಶೆಟ್ಟಿ,ಜಿಲ್ಲಾ ಕಾರ್ಯದರ್ಶಿಗಳಾದ ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು,ಬೂಡಾ ಮಾಜಿ ಅಧ್ಯಕ್ಷ
ದೇವದಾಸ್ ಶೆಟ್ಟಿ,ಪುರಸಭಾ ಸದಸ್ಯ ಗೋವಿಂದ ಪ್ರಭು, ಪ್ರಮುಖರಾದ ಸುಲೋಚನ ಜಿ.ಕೆ ಭಟ್,ರಾಮದಾಸ್ ಬಂಟ್ವಾಳ ಮೊದಲಾದವರಿದ್ದರು.