ಪೊಳಲಿ: ರಾಮಕೃಷ್ಣ ತಪೋವನದಲ್ಲಿ ೧೦ ನೇ ವಿಶ್ವ ಯೋಗ ದಿನಾಚರಣೆ
ಪೊಳಲಿ: ರಾಜರಾಜೇಶ್ವರೀ ಸರಕಾರಿ ಪ್ರೌಢಶಾಲೆ ಪೊಳಲಿಯ ವಿದ್ಯಾರ್ಥಿಗಳಿಗೆ ರಾಮಕೃಷ್ಣ ತಪೋವನದಲ್ಲಿ ೧೦ ನೇ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸದಸ್ಯರಾದ ಕೇಶವ ಪೊಳಲಿ ಮಾರ್ಗದರ್ಶನ ನೀಡಿದರು.

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸದಸ್ಯರು ವಿದ್ಯಾರ್ಥಿಗಳಿಗೆ ವಿವಿಧ ಆಸನ ಭಂಗಿಯನ್ನು ತಿಳಿಸಿದರು. ೧೦ ನೇ ವಿಶ್ವ ಯೋಗ ದಿನಾಚರಣೆಯನ್ನು ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮೀಜಿ ಉದ್ಘಾಟಿಸಿ ಶುಭಹಾರೈದರು.

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾ ವಿಧಿಯನ್ನು ವಸಂತಿ ಬೋಧಿಸಿದರು. ಸಭೆಯ ಅಧ್ಯಕ್ಷತೆಯನ್ನು ಯಶವಂತ ಕೋಟ್ಯಾನ್ ಪೊಳಲಿ ವಹಿಸಿ ಶುಭ ಹಾರೈಸಿದರು.ಮುಖ್ಯ ಶಿಕ್ಷಕ ಸುಬ್ರಾಯ ಪೈ ಇದ್ದರು.

ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಜಯಂತ್ ಆಚಾರ್ಯ ಸ್ವಾಗತಿಸಿದರು. ಶಿಕ್ಷಕಿ ಉಮಾ ವಂದಿಸಿದರು.