ಬಂಟ್ವಾಳ ಬಿಜೆಪಿಯಿಂದ ಯೋಗ ದಿನಾಚರಣೆ
ಬಂಟ್ವಾಳ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ ಬಿ. ಸಿ ರೋಡ್ ನಲ್ಲಿ ನಡೆದ ಯೋಗಾಭ್ಯಾಸ ಕಾರ್ಯಕ್ರಮಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಮಂಡಲ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್,ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್,ಸುಲೋಚನ ಜಿ.ಕೆ ಭಟ್, ರಾಮದಾಸ್ ಬಂಟ್ವಾಳ,ದಿನೇಶ್ ಅಮ್ಟೂರು,ವಿಹಿಂಪ ಪ್ರಮುಖರಾದ ಪ್ರಸಾದ್ ಕುಮಾರ್ ರೈ, ರಾಷ್ಟ್ರಿಯ ಸ್ವಯಂಸೇವಕ ಸಂಘದ ತಾಲೂಕು ಸಂಘಚಾಲಕರಾದ ಡಾ.ಬಾಲಕೃಷ್ಣ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.