ಬಂಟ್ವಾಳ:ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳ ಉಳಿವಿಗೆ ಸ್ಥಳೀಯ ದಾನಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ನೆರವು ಅಗತ್ಯವಾಗಿದ್ದು, ಸರ್ಕಾರದ ಪ್ರೋತ್ಸಾಹವೂ ಅಗತ್ಯವಿದೆ ಎಂದು ನಿವೃತ್ತ ಮುಖ್ಯಶಿಕ್ಷಕ ಸೋಮಪ್ಪ ಮಡಿವಾಳ ಹೇಳಿದರು.
ಇಲ್ಲಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯುಕೆಜಿ ತರಗತಿ ಪ್ರಾರಂಭೋತ್ಸವಕ್ಕೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.


ರಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂತೋಷ್ ಕುಮಾರ್ ಬೆಟ್ಟು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವಿವೇಕಾನಂದ ಚಾರಿಟೇಬಲ್ ಟ್ರಸ್ಟ್ ಸದಸ್ಯ ಪ್ರವೀಣ ಅಂಚನ್ ಕೊಯಿಲ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ ಗೌಡ ಮೀಯಾಲು, ಉಪಾಧ್ಯಕ್ಷೆ ಚಂದ್ರಾವತಿ ಲೋಕೇಶ್, ಗ್ರಾ.ಪಂ.ಮಾಜಿ ಉಪಾಧ್ಯಕ್ಷೆ ಹೇಮಾ ಎಚ್.ರಾವ್, ಪ್ರಮುಖರಾದ ಮೋಹನ್ ಕೆ.ಶ್ರೀಯಾನ್, ಪದ್ಮನಾಭ ಗೌಡ ಕುಟ್ಟಿಕಳ, ಸೋಮನಾಥ ಗೌಡ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಪ್ರೇಮಲತಾ, ಶಿಕ್ಷಕರಾದ ಬೇಬಿ ಅರಳ, ಸಿದ್ಧಪ್ಪ ಕಡೂರು, ತನುಜಾ ಮತ್ತಿತರರು ಇದ್ದರು.


ಇದೇ ವೇಳೆ ವಿದ್ಯಾರ್ಥಿಗಳಿಗೆ ಹೂವು ಮತ್ತು ಸಿಹಿ ತಿಂಡಿ ನೀಡಿ ಸ್ವಾಗತಿಸಲಾಯಿತು. ಸಾಮೂಹಿಕ ಯೋಗ ಪ್ರದರ್ಶನ ನಡೆಯಿತು.
ವಿವೇಕಾನಂದ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಹರೀಶ ಆಚಾರ್ಯ ಸ್ವಾಗತಿಸಿ, ಮುಖ್ಯಶಿಕ್ಷಕಿ ಜಾನೆಟ್ ಕಾನ್ಸೆಸೊ ವಂದಿಸಿದರು.

By suddi9

Leave a Reply

Your email address will not be published. Required fields are marked *