ಯಕ್ಷಧ್ರುವ ಪಟ್ಲ ಫೌಂಡೇಶನ್‌ನಿಂದ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಯಕ್ಷಶಿಕ್ಷಣ ತರಗತಿ ಉದ್ಘಾಟನೆ
ಬಂಟ್ವಾಳ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಡೆಸುವ ಯಕ್ಷಧ್ರುವ-ಯಕ್ಷಶಿಕ್ಷಣ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನದ ಪ್ರಯುಕ್ತ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಪ್ರೌಢಶಾಲಾ ವಿಭಾಗದಲ್ಲಿ ಶುಕ್ರವಾರ ಚಾಲನೆಗೊಂಡಿತು.ಯಕ್ಷ ಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕದ ಗೌರವ ಮಾರ್ಗದರ್ಶಿ ಜಯಂತ್ ಶೆಟ್ಟಿ ಅವರು ಉದ್ಘಾಟಿಸಿ ಮಾತನಾಡಿ,ಯಕ್ಷಗಾನ ನೃತ್ಯ, ಹಾಡು, ಮಾತು, ವೇಷ ಭೂಷಣ, ಸಂಗೀತವನ್ನೊಳಗೊಂಡ ಸರ್ವಾಂಗೀಣ ಕಲೆಯಾಗಿದ್ದು,ವಿದ್ಯಾರ್ಥಿಗಳಿಗೆ ಭಾಷಾ ಸಂವಹನ, ನಡೆನುಡಿ, ಪುರಾಣ ಜ್ಞಾನವೃದ್ಧಿ, ವ್ಯಾಯಾಮಕ್ಕೆ ಪೂರಕವಾಗಿದೆ ಎಂದರು.

ಘಟಕ ಅಧ್ಯಕ್ಷ ಯಶೋಧರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಘಟಕದ ಯಕ್ಷಗುರು ದಿನೇಶ್ ಶೆಟ್ಟಿ ಕಾವಳಕಟ್ಟೆ ಅವರು ಮಾತನಾಡಿ, ಯಕ್ಷಗಾನ ಕಲೆಯನ್ನು ಮತ್ತು ಕಲಾವಿದರನ್ನು ಬೆಳೆಸುವ ನಿಟ್ಟಿನಲ್ಲಿ ಪಟ್ಲ ಸತೀಶ್ ಶೆಟ್ಟಿ ನೇತೃತ್ವದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಉಚಿತವಾಗಿ ಯಕ್ಷಗಾನ ನಾಟ್ಯ ತರಬೇತಿ ನೀಡಲಾಗುತ್ತಿದೆ ಎಂದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ಯಾಂ ಪ್ರಸಾದ್ ಸಂಪಿಗೆತ್ತಾಯ, ಯಕ್ಷಗುರುಗಳಾದ ರಕ್ಷಿತ್ ಶೆಟ್ಟಿ ಪಡ್ರೆ, ಸಾಯಿಸುಮಾ ನಾವಡ, ದಿವಾಕರ ದಾಸ್ ಕಾವಳಕಟ್ಟೆ,ಘಟಕ ಮಹಿಳಾ ಸಮಿತಿ ಪ್ರಮುಖರಾದ ಲಕ್ಷ್ಮೀ ಸಂಜೀವ ಶೆಟ್ಟಿ, ಉಮಾ ಡಿ.ಗೌಡ, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಮಂಜಪ್ಪ,ಜಯರಾಮ ಶೆಟ್ಟಿ, ಕಿಶೋರ್ ಶೆಟ್ಟಿ, ಘಟಕ ಪ್ರಮುಖರಾದ ಪುರುಷೋತ್ತಮ ಪೂಜಾರಿ ಬೊಳೆಕ್ಕಿನಕೋಡಿ, ರಮೇಶ್ ಶೆಟ್ಟಿ ಮಜಲೋಡಿ, ಪ್ರಭಾಕರ ಪಿ.ಎಂ., ಉದಯ ಕುಮಾರ್ ಶೆಟ್ಟಿ, ಯೋಗೀಶ್ ಪೂಜಾರಿ, ವಿನೋದ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ ಕುಮಂಗಿಲ, ದಿನಕರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಶಾಲಾ ಉಪಪ್ರಾಂಶುಪಾಲ ಬಿ.ಉದಯ ಕುಮಾರ್ ಜೈನ್ ಸ್ವಾಗತಿಸಿ, ಪ್ರಸ್ತಾವಿಸಿದರು. ರತ್ನದೇವ್ ಪುಂಜಾಲಕಟ್ಟೆ ವಂದಿಸಿದರು. ಶಿಕ್ಷಕ ನಿರಂಜನ್ ಜೈನ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ರಾಜೇಶ್ ಸಹಕರಿಸಿದರು. ನಾಟ್ಯಗುರು ಶ್ರೀವತ್ಸ ಸೋಮಯಾಜಿ ಯಕ್ಷಗಾನ ನಾಟ್ಯ ತರಬೇತಿ ನಡೆಸಿಕೊಟ್ಟರು.
–