ಕಾರ್ಮೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ
ಬಂಟ್ವಾಳ: ಕಾರ್ಮೆಲ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಕಾರ್ಮೆಲ್ ಸಭಾಂಗಣದಲ್ಲಿ ಜರುಗಿತು.

ಕಾರ್ಮೆಲ್ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರವಿಲ್ಲ ಡಿಂಪಲ್ ಫೆರ್ನಾಂಡಿಸ್ ಸಂಘದ ಉದ್ಘಾಟನೆ ನೆರವೇರಿಸಿ ಮಾತನಾಡಿ, ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ದಕ್ಷತೆಯಿಂದ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿ, ಎಲ್ಲರಿಗೂ ಆದರ್ಶಪ್ರಾಯರಾಗಿ ಸಮಾಜಕ್ಕೆ ಉತ್ತಮ ಕೊಡುಗೆಗಳನ್ನು ನೀಡುವಂತವರಾಗಬೇಕೆಂದರು.
ಪ್ರಾಂಶುಪಾಲರಾದ ವಂದನೀಯ ಭಗಿನಿ ನವೀನ ಎ.ಸಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿ, ಶುಭ ಹಾರೈಸಿದರು. ಉಪ ಪ್ರಾಂಶುಪಾಲರಾದ ವಂದನೀಯ ಭಗಿನಿ ಫೆಲ್ಸಿಟ ಎ.ಸಿ ಉಪನ್ಯಾಸಕರಾದ ಸುರೇಶ್ ನಂದೊಟ್ಟು, ಶ್ರೀವಿದ್ಯಾ ವೇದಿಕೆಯಲ್ಲಿ ಉಪಸ್ಥಿತರಿದ್ದರು,