ಎಸ್.ವಿ.ಎಸ್.ದೇವಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಬಂಟ್ವಾಳ:ಇಲ್ಲಿನ ಎಸ್.ವಿ.ಎಸ್.ದೇವಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯೋಪಾಧ್ಯಾಯಿನಿ ರೋಶನಿ ತಾರಾ ಡಿಸೋಜ, ಸಹ ಮುಖ್ಯೋಪಾಧ್ಯಾಯಿನಿ ಜಾನಕಿ ರಾಜೇಶ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಯೋಗದ ಮಹತ್ವ ಅದರ ಪ್ರಯೋಜನಗಳನ್ನು ೧೦ ನೇತರಗತಿಯ ವಿದ್ಯಾರ್ಥಿನಿ ಕು. ದ್ರುತಿ ವಿವರಿಸಿದರು. ಪತಂಜಲಿ ಯೋಗ ಶಿಕ್ಷಣ ಸಮಿತಿ ದುರ್ಗಾಂಬಾ ಶಾಖೆ ಮಂಡಾಡಿಯ ಯೋಗ ಶಿಕ್ಷಕರಾದ ಉಮೇಶ್, ಸುರೇಖಾ ಹಾಗೂ ವಿನಯಾ ಇವರು ಪ್ರಾತ್ಯಕ್ಷಿಕೆಯ ಮೂಲಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು.
ಶಿಕ್ಷಕರಾದ ಚಂದ್ರಹಾಸ್ ಶೆಟ್ಟಿ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಶಿಕ್ಷಕಿ ವೇದಾವತಿಯವರು ಆಸನಗಳ ಭಂಗಿ ಅದರ ಪ್ರಯೋಜನಗಳನ್ನು ವಿವರಿಸಿದರು ಸುಮಾರು ೭೩೦ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಯೋಗವನ್ನು ಮಾಡುವ ಮೂಲಕ ಗಮನ ಸೆಳೆದರು.