ಮಂಗಳೂರು: ಕುತ್ತಾರು ಎಂಬಲ್ಲಿ ಮುಂಜಾನೆ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು
ಸಾವನ್ನಪ್ಪಿರುವ ಘಟನೆ ಬಗ್ಗೆ ಬೇಸರ ವ್ಯಕ್ತ ಪಡಿಸಿದ ಬ್ರಿಜೇಶ್ ಅವರು ಇದು ಅತ್ಯಂತ ದುರದೃಷ್ಟಕರ ಎಂದರು ಮೃತರ ಕುಟುಂಬಕ್ಕೆ ಸಂತ್ವಾನ ಹೇಳಿದ್ದಾರೆ.


ಘಟನೆಯಲ್ಲಿ ಮಡಿದವರ ಆತ್ಮಕ್ಕೆ ಸದ್ಗತಿಯನ್ನು ಕೋರಿದರು. ಲೋಕಸಭಾ ಅಧಿವೇಶನದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿರುವ ಕಾರಣ ಕುತ್ತಾರು ಘಟನಾ ಸ್ಥಳಕ್ಕೆ ಭೇಟಿ ನೀಡಲು ಅಸಾಧ್ಯಾವಾದ ಕಾರಣ
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅವರೊಂದಿಗೆ ಮಾತನಾಡಿ ಘಟನೆಯ ಬಗ್ಗೆ ತುರ್ತು ಸ್ಪಂದಿಸುವAತೆ
ದೆಹಲಿಯಿಂದ ಆಗಮಿಸಿದ ತಕ್ಷಣ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದೇನೆ ಎಂದಿದ್ದಾರೆ.


ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಜಿಲ್ಲೆಯ ಜನರು ವಿಶೇಷವಾಗಿ ಮೀನುಗಾರರು, ನದಿ ಪಾತ್ರದ ಜನರ ಹಾಗೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಎಚ್ಚರ ವಹಿಸುವಂತೆ ವಿನಂತಿಸಿದ್ದಾರೆ. ಪ್ರಾಕೃತಿಕ ವಿಕೋಪದ ಘಟನೆಗಳನ್ನು
ತಡೆಯುವ ನಿಟ್ಟಿನಲ್ಲಿ ಸೂಕ್ತ ಮುನ್ನೆಚ್ಚರಿಕೆಯ ಕ್ರಮವನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ
ನೀಡಿದ್ದಾರೆ.

By suddi9

Leave a Reply

Your email address will not be published. Required fields are marked *