ಬಂಟ್ವಾಳ:  ದ.ಕ.ತೋಟಾಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಜಾರಿಗೊಳಿಸಿರುವ ರಾಜ್ಯ ಸರಕಾರದ ಸಹಭಾಗಿತ್ವದ  ಯೋಜನೆಯಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು 2024-25 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿಗೆ ಸಂಬಂದಿಸಿದಂತೆ ಬೆಳೆವಿಮೆ ಮಾಡಲು ಪ್ರೀಮಿಯಂ ಪಾವತಿ ಆರಂಭವಾಗಿದೆ ಎಂದು ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ನಿ.ಅಧ್ಯಕ್ಷ ಪ್ರಭಾಕರ ಪ್ರಭು ತಿಳಿಸಿದ್ದಾರೆ.


ಅಡಿಕೆ ,ಕರಿಮೆಣಸು  ಬೆಳೆಗಳಿಗೆ ಸಂಬಂಧಿಸಿದಂತೆ ಬೆಳೆಸಾಲ ಪಡೆದಿರುವ ರೈತರು ಬೆಳೆ ಸಾಲ ಹೊಂದಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಥವಾ  ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ನೋಂದಾವಣೆ ಮಾಡಿಸಿ ಪ್ರಿಮಿಯಂ ಮೊತ್ತ ಪಾವತಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿರುವ ಅವರು ಬೆಳೆ ಸಾಲ ಹೊಂದಿಲ್ಲದ ರೈತರು ಕೂಡ  ಈ ಯೋಜನೆಯಡಿಯಲ್ಲಿ ಪ್ರೀಮಿಯಂ ಮೊತ್ತ ಪಾವತಿಸಿ ಯೋಜನೆಯ ಸದುಪಯೋಗ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.


ರೈತರು ತಾವು ಬೆಳೆದ ಬೆಳೆಗಳನ್ನು ಬೆಳೆ ಸಮೀಕ್ಷೆ ಮಾಡಿಸಬೇಕು ಹಾಗೂ ಫಾರ್ಮರ್ ಐಡಿ ಹೊಂದಿರಬೇಕು ಅಡಿಕೆ ಬೆಳೆಗೆ ಸಂಬಂಧಿಸಿದಂತೆ ಎಕರೆ ಒಂದಕ್ಕೆ  2590 ರೂ. ಮತ್ತು ಕರಿಮೆಣಸು ಎಕರೆ ಒಂದಕ್ಕೆ  951ರೂ. ವಿಮಾ ಕಂತು ಪಾವತಿಸಬೇಕಾಗುತ್ತದೆ.ಈ ಯೋಜನೆಯ ನೋಂದಾವಣಿಗೆ ಜುಲೈ 31 ಕೊನೆಯ ದಿನವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  ಬೆಳೆಸಾಲ ಪಡೆದಿರುವ ಎಲ್ಲಾ ರೈತ ಬಾಂದವರು ಜಮೀನಿನ ಆರ್.ಟಿ.ಸಿ ಯೊಂದಿಗೆ ಆಧಾರ್ ಕಾರ್ಡ್ , ಬ್ಯಾಂಕ್ ಪುಸ್ತಕದೊಂದಿಗೆ ನಿಗದಿತ ಅವಧಿಯೊಳಗೆ ತಮ್ಮ ಕಾರ್ಯ ವ್ಯಾಪ್ತಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಕಛೇರಿಗಳನ್ನು ಸಂಪರ್ಕಿಸಿ ಬೆಳೆವಿಮೆ ಯೋಜನೆ ಪ್ರಯೋಜನ ಪಡೆಯುವಂತೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ 

By suddi9

Leave a Reply

Your email address will not be published. Required fields are marked *