ಕೆಲಿಂಜ ಶಾಲೆಯಲ್ಲಿ ಮಲೇರಿಯಾ ನಿಯಂತ್ರಣ ಜಾಗೃತಿ ಕಾರ್ಯಗಾರ
ಬಂಟ್ವಾಳ: ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಇದರ ವತಿಯಿಂದ ಮಲೇರಿಯಾ ನಿಯಂತ್ರಣ ಜಾಗ್ರತಿ ಮಾಹಿತಿ ಕಾರ್ಯಕ್ರಮವು ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಕೆಲಿಂಜ
ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿನಡೆಯಿತು.ವಿಟ್ಲ ಸಮುದಾಯ ಅರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕುಸುಮ ಮಲೇರಿಯಾ ರೋಗದ ಲಕ್ಷಣ, ಬರಲು ಕಾರಣ, ಹಾಗೂ ಇದರ ನಿಯಂತ್ರಣ ಮಾಡುವ ಬಗ್ಗೆ ಮಾಹಿತಿಯನ್ನು ನೀಡಿದರು .

ಹಿರಿಯ ಆಡಳಿತ ವೈದ್ಯಾಧಿಕಾರಿ ವೇದಾವತಿ, ವೀರಕಂಭ ಗ್ರಾಮ ಪಂಚಾಯತ್ ಸದಸ್ಯ ಜಯಪ್ರಸಾದ್,ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಪೆಲತ್ತಡ್ಕ,ಕಾರ್ಯದರ್ಶಿ ಸಂತೋಷ್ ಶೆಟ್ಟಿ ಸೀನಾಜೆ, ಶಾಲಾಭಿವೃದ್ಧಿ ಸಮಿತಿಯ ಆದ್ಯೆಕ್ಷೆ ಜಯಂತಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಜ್ಯೋತಿ , ಆಶಾ ಕಾರ್ಯಕರ್ತೆ ಸ್ನೇಹಲತ ವೇದಿಕೆಯಲ್ಲಿದ್ದರು.
ಮುಖ್ಯ ಶಿಕ್ಷಕ ತಿಮ್ಮಪ್ಪ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.ಶಾಲಾ ಶಿಕ್ಷಕಿಯರು ಸಹಕರಿಸಿದರು.