ಪಂಜಿಕಲ್ಲು ಆಚಾರಿಪಲ್ಕೆ ಸರಕಾರಿ ಪ್ರಾಥಮಿಕ ಶಾಲೆಯಲ್ಲು ಇಂಗ್ಲಿಷ್ ಮಾಧ್ಯಮಕ್ಕೆ ಪ್ರಯತ್ನ: ಶಾಸಕ ನಾಯ್ಕ್
ಬಂಟ್ವಾಳ: ಪಂಜಿಕಲ್ಲು ಆಚಾರಿಪಲ್ಕೆ ಸರಕಾರಿ ಪ್ರಾಥಮಿಕ ಶಾಲೆಯಲ್ಲು ಇಂಗ್ಲಿಷ್ ಮಾಧ್ಯಮದ ಬೇಡಿಕೆಯನ್ನು ಈಡೇರಿಸುವ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.
ಬಂಟ್ವಾಳ ತಾಲೂಕಿನ ಪಂಜಿಕಲ್ಲು ಆಚಾರಿಪಲ್ಕೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 13.90 ಲಕ್ಷ ರೂ.ವೆಚ್ಚದಲ್ಲಿ ವಿವೇಕ ಶಾಲಾ ಕೊಠಡಿ ಯೋಜನೆಯಡಿ ನಿರ್ಮಾಣಗೊಂಡ ನೂತನ ಕೊಠಡಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದ ಅವಧಿಯಲ್ಲಿ ವಿವೇಕಶಾಲಾ ಕೊಠಡಿ ಯೋಜನೆಯಡಿ ಅತೀ ಹೆಚ್ಚು ಅನುದಾನ ಬಂಟ್ವಾಳ ವಿಧಾನ ಸಭಾ ಕ್ಷೇತ್ರಕ್ಕೆ ಮಂಜೂರಾಗಿದ್ದು,ಗ್ರಾಮೀಣ ಭಾಗದ ಪ್ರತಿಯೊಂದು ಸರಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದ ಶಾಸಕರು ಮುಂದಿನ ದಿನಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿರುವ ಶಾಲೆಗಳಿಗೆ ಸರಕಾರದಿಂದ ಸಿಗುವ ಅನುದಾನವನ್ನು ಆದ್ಯತೆ ನೆಲೆಯಲ್ಲಿ ಒದಗಿಸಲಾಗುವುದು ಎಂದು ಭರವಸೆಯಿತ್ತರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ,ಪಂಜಿಕಲ್ಲು ಗ್ರಾಮ ಪಂಚಾಯತ್ ಅಧ್ಯಕ್ಷೆ ನಳಿನಿ ಪ್ರಸಾದ್,ಪಂಚಾಯತ್ ಸದಸ್ಯರುಗಳಾದ ಸಂಜೀವ ಪೂಜಾರಿ ಪಿಲಿಂಗಾಲ್,ಲಕ್ಷ್ಮಿ ನಾರಾಯಣ ಗೌಡ,ಜಯಶ್ರೀ ಪಟ್ರಾಡಿ, ಮಾಜಿ ಪಂಚಾಯತ್ ಸದಸ್ಯರಾದ ಕೃಷ್ಣರಾಜ್ ಜೈನ್,ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಸುಪ್ರೀತಾ,ಉಪಾಧ್ಯಕ್ಷರಾದ ಮೋನಪ್ಪ ಗೌಡ ಉಪಸ್ಥಿತರಿದ್ದರು.
ಮರ್ಸಿನ್ ಮೆಥಿ ಪಾಯಸ್ ಸ್ವಾಗತಿಸಿದರು, ಜಯಶ್ರೀ ವಂದಿಸಿದರು. ಲಿಖಿತ ಕಾರ್ಯಕ್ರಮ ನಿರೂಪಿಸಿದರು.