ದಡ್ಡಲಕಾಡು ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಪ್ರತಿನಿಧಿಗಳಿಗೆ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ
ಬಂಟ್ವಾಳ: ದಡ್ಡಲಕಾಡು ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನೂತನವಾಗಿ ಆಯ್ಕೆಯಾದ ಶಾಲಾ ಮಂತ್ರಿ ಮಂಡಲದ ಪ್ರತಿನಿಧಿಗಳಿಗೆ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವನ್ನು ನಡೆಸಲಾಯಿತು.

ನೂತನವಾಗಿ ಆಯ್ಕೆಯಾದ ಪ್ರತಿನಿಧಿಗಳನ್ನು ಬ್ಯಾಂಡ್ ನ ಮೂಲಕ ಅದ್ದೂರಿಯಾಗಿ ವೇದಿಕೆಗೆ ಕರೆತರಲಾಯಿತು. ಶಾಲಾ ಹಿರಿಯ ಶಿಕ್ಷಕಿಯಾದ ಹಿಲ್ಡಾ ಫೆರ್ನಾಂಡಿಸ್ ನೂತನವಾಗಿ ಆಯ್ಕೆಯಾದ ಶಾಲಾ ಪ್ರತಿನಿಧಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಪ್ರಮಾಣವಚನ ಸ್ವೀಕರಿಸಿದ ನಂತರ ಮಾತನಾಡಿದ ಶಾಲಾ ನಾಯಕಿ ಪ್ರೀತಿ ಶಾಲೆಯ ಅಭಿವೃದ್ಧಿಗಾಗಿ ಸದಾಕಾಲ ಶಿಕ್ಷಕರ ಮಾರ್ಗದರ್ಶನ ಮೇರೆಗೆ ಶ್ರದ್ಧೆಯಿಂದ ಕೆಲಸ ಮಾಡುವುದಾಗಿ ಭರವಸೆಯಿತ್ತರು. ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ವಿನ್ನಿ ಸಿಂಥಿಯಾ, ಪ್ರಾಥಮಿಕ ವಿಭಾಗದ ಎಸ್. ಡಿ. ಎಂ. ಸಿ ಅಧ್ಯಕ್ಷ ರಾಮಚಂದ್ರ ಕರೆಂಕಿ , ಸಂಸ್ಥೆಯ ಹಿರಿಯ ಶಿಕ್ಷಕಿ ಹಿಲ್ಡಾ ಫೆರ್ನಾಂಡಿಸ್, ಸಂಸ್ಥೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಿಕ್ಷಕಿಯರಾದ ನೀಕ್ಷಿತಾ ಸ್ವಾಗತಿಸಿ, ಪ್ರಜ್ಞಾ ವಂದಿಸಿದರು. ಸ್ವಾತಿ ಮುಕುಡ ಕಾರ್ಯಕ್ರಮ ನಿರೂಪಿಸಿದರು