ದಕ್ಷಿಣ ಭಾರತ ವಲಯ ಮಟ್ಟದ ಕಬಡ್ಡಿ’ ರಾಷ್ಟ್ರಮಟ್ಟಕ್ಕೆ ಆಯ್ಕೆ
ಬಂಟ್ವಾಳ: ಹೆಚ್. ಸಿ .ಎಲ್ ಫೌಂಡೇಶನ್ ಆಯೋಜಿಸಿದ ಸ್ಪೋರ್ಟ್ಸ್ ಫಾರ್ ಚೇಂಜ್ ದಕ್ಷಿಣ ಭಾರತ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಮಂಚಿ ಕೊಳ್ನಾಡು ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ಫಾಝಿಲ್ ಅತ್ಯುತ್ತಮ ಪ್ರದರ್ಶನ ನೀಡಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಆಂಧ್ರಪ್ರದೇಶದ ವಿಜಯವಾಡದಲ್ಲಿ ಈಚೆಗೆ ನಡೆದ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಇವರ ತಂಡ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.
ಚೆನ್ನೈಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಇವರು ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇವರಿಗೆ ರೂಪೇಶ್ ಇರಾ ಹಾಗೂ ಕಾರ್ತಿಕ್ ಇರಾ ತರಬೇತು ನೀಡುತ್ತಿದ್ದಾರೆ.