ಎಲ್ ಕೆ ಜಿ ಮಕ್ಕಳಿಗೆ ಸಮವಸ್ತ್ರ ವಿತರಣೆ
ಬಂಟ್ವಾಳ: ರಾಯಿ ಶಾಲಾಭಿವೃದ್ಧಿ ಸಮಿತಿಯ ಬೇಡಿಕೆಗೆ ಸ್ಪಂದಿಸಿದ ಹಳೇ ವಿದ್ಯಾರ್ಥಿ ಸಂಘ ರಾಯಿ ಶಾಲಾ ಎಲ್ ಕೆ ಜಿ ಮಕ್ಕಳಿಗೆ ಹಾಗೂ ನೂತನವಾಗಿ ಸೇರ್ಪಡೆಯಾದ ಪ್ರಾಥಮಿಕ ಶಾಲಾ ಮಕ್ಕಳಿಗೆ ಶಾಲಾ ಸಮವಸ್ತ್ರ ವಿತರಿಸಿತು.

ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸಮಿತ್ ಶಿವನಗರ, ರಾಯಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಕುಮಾರ್ ರಾಯಿ ಬೆಟ್ಟು, ರಾಯಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಹರೀಶ್ ಆಚಾರ್ಯ ರಾಯಿ ಹಾಗೂ ಶಿಕ್ಷಕ ಸಿಬ್ಬಂದಿ ವರ್ಗ ಮತ್ತು ಹಳೇ ವಿದ್ಯಾರ್ಥಿ ಸಂಘದ ಸದಸ್ಯರು ಉಪಸ್ಥಿತರಿದ್ದರು.