ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್ : ವಿದ್ಯಾರ್ಥಿಸಂಘ ಉದ್ಘಾಟನೆ
ಬಂಟ್ವಾಳ : ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿ ಜೀವನದ ಬೆಳವಣಿಗೆಗೆ ಅಡಿಗಲ್ಲು. ಬಾಲ್ಯದಿಂದಲೇ ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದೊಂದಿಗೆ ನಾಯಕತ್ವದ ಗುಣ ಬೆಳೆಸಿಕೊಂಡರೆ, ಭವಿಷ್ಯದಲ್ಲಿ ಅವರ ಆತ್ಮವಿಶ್ವಾಸವನ್ನು ವೃದ್ಧಿಸುತ್ತದೆ ಎಂದು ಬಂಟ್ವಾಳ ಎಸ್.ವಿ.ಎಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಸುಯೋಗ ವರ್ಧನ್ .ಡಿ.ಎಂ ಅವರು ಹೇಳಿದರು.

ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯ ೨೦೨೪-೨೫ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಸಂಘ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ನಂಬಿಕೆ, ದೃಢತೆ, ಸಾಮರಸ್ಯದೊಂದಿಗೆ ಭವಿಷ್ಯದತ್ತ ಹೆಜ್ಜೆ ಹಾಕಬೇಕೆಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಶ್ರೀಮತಿ ಜೂಲಿ.ಟಿ.ಜೆ ಪ್ರತಿಜ್ಙಾವಿಧಿ ನೆರವೇರಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಉಪಪ್ರಾಂಶುಪಾಲೆ ಪೂರ್ಣೇಶ್ವರಿ ಭಟ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಸುರೇಖ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿ ನಾಯಕ ಕೀತ್ ಈವನ್ ಅಲ್ವಾರಿಸ್, ಉಪನಾಯಕಿ ಚಿನ್ಮಯಿ ಶೆಟ್ಟಿ ಜೊತೆಗೆ ಇತರ ೨೪ ನಾಯಕರು ಅಧಿಕಾರ ವಹಿಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಾದ ಪ್ರಾಪ್ತಿ ಆಳ್ವ, ಸ್ವಸ್ತಿಕ್ ಶೆಣೈ ಕಾರ್ಯಕ್ರಮ ನಿರ್ವಹಿಸಿದರು.