ಬಂಟ್ವಾಳ: ಭಾರತೀಯ ಜೀವ ವಿಮಾ ನಿಗಮ ಪ್ರತಿನಿಧಿಗಳ ಸಂಘದ ವಾರ್ಷಿಕೋತ್ಸವ, ಸಾಧಕರಿಗೆ ಸನ್ಮಾನ
ಬಂಟ್ವಾಳ:ದೇಶದ ಆರ್ಥಿಕತೆ ಮತ್ತು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡುತ್ತಿರುವ ಭಾರತೀಯ ಜೀವ ವಿಮಾ ನಿಗಮ ಸಂಸ್ಥೆಯಲ್ಲಿ ದುಡಿಯುವ ಪ್ರತಿನಿಧಿಗಳು ಸಂಘಟಿತರಾದಾಗ ದೇಶ ಸೇವೆ ಸಲ್ಲಿಸಲು ಮತ್ತಷ್ಟು ಹೆಚ್ಚಿನ ಶಕ್ತಿ ಬರುತ್ತದೆ ಎಂದು ಬಂಟ್ವಾಳ ಎಲ್ಲೆöÊಸಿ ಮುಖ್ಯ ಶಾಖಾಧಿಕಾರಿ ಕೆ.ಸತೀಶ್ ಕುಮಾರ್ ಹೇಳಿದ್ದಾರೆ.

ಇಲ್ಲಿನ ಬಿ.ಸಿ.ರೋಡು ಲಯನ್ಸ್ ಸಭಾಂಗಣದಲ್ಲಿ ಭಾರತೀಯ ಜೀವ ವಿಮಾ ನಿಗಮ ಪ್ರತಿನಿಧಿಗಳ ಸಂಘ ( ಲಿಕಾಯ್ ) ಇದರ ವತಿಯಿಂದ ಶನಿವಾರ ನಡೆದ ವಾರ್ಷಿಕೋತ್ಸವ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಬಂಟ್ವಾಳ ಘಟಕ ಅಧ್ಯಕ್ಷ ಪ್ರಶಾಂತ್ ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಘದ ರಾಜ್ಯಾಧ್ಯಕ್ಷ ಎ.ಎಸ್.ಲೋಕೇಶ್ ಶೆಟ್ಟಿ, ಉಡುಪಿ ವಿಭಾಗ ಅಧ್ಯಕ್ಷ ಎಂ.ಎಸ್.ಭಟ್, ಬಂಟ್ವಾಳ ಉಪ ಶಾಖಾಧಿಕಾರಿ ಕೃಪಾಲ್ ಬಿ.ಎಚ್., ಮಹಿಳಾ ಸಮಿತಿ ಅಧ್ಯಕ್ಷೆ ವಿಜಯಾ ಕುಮಾರಿ ಇಂದ್ರ ಶುಭ ಹಾರೈಸಿದರು.
ಇದೇ ವೇಳೆ ವಿಶೇಷ ಸಾಧಕರಿಗೆ ಸನ್ಮಾನ, ಸಂಘದ ನೂತನ ಅಧ್ಯಕ್ಷರಾಗಿ ಚಿತ್ತರಂಜನ್ ಆಯ್ಕೆಗೊಂಡರು. ಪ್ರಧಾನ ಕಾರ್ಯದರ್ಶಿ ನವೀನ್ ಕೊಡ್ಮಾಣ್ ವಾರ್ಷಿಕ ವರದಿ ಮತ್ತು ಕೋಶಾಧಿಕಾರಿ ಪ್ರಕಾಶ್ ಅಮ್ಟಾಡಿ ಲೆಕ್ಕಪತ್ರ ಮಂಡಿಸಿದರು. ಹಿರಿಯ ಸದಸ್ಯ ಧರಣೇಂದ್ರ ಜೈನ್ ಸಂಘಟನೆ ಬಗ್ಗೆ ಮಾಹಿತಿ ನೀಡಿದರು. ಮಾಜಿ ಅಧ್ಯಕ್ಷ ರೋಹಿದಾಸ್ ಕುಂದರ್ ಸ್ವಾಗತಿಸಿ, ಕಾರ್ಯದರ್ಶಿ ಆನಂದ ಸಾಲ್ಯಾನ್ ವಂದಿಸಿದರು. ಮಾಜಿ ಕಾರ್ಯದರ್ಶಿ ನಾರಾಯಣ ಅಮೀನ್ ಕಾರ್ಯಕ್ರಮ ನಿರೂಪಿಸಿದರು.