ಸಿದ್ಧಕಟ್ಟೆ: ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ
ಬಂಟ್ವಾಳ:ಶಿಕ್ಷಣದ ಜೊತೆಗೆ ಸಾಧನಾ ಮನೋಭಾದಿಂದ ಅದ್ಯಯನ ನಡೆಸಿದಾಗ ಉನ್ನತ ಸ್ಥಾನಮಾನ ಏರಲು ಸಾಧ್ಯವಿದೆ ಎಂದು ಮೂಡುಬಿದ್ರೆ ಮಹಾವೀರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರೊ.ರಮೇಶ್ ಭಟ್ ಹೇಳಿದ್ದಾರೆ.ಇಲ್ಲಿನ ಸಿದ್ಧಕಟ್ಟೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ವಿದ್ಯಾರ್ಥಿ ಸಂಘ ಮತ್ತು ಇತರ ಸಂಘಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಉದಯ ಕುಮಾರ್ ವಿದ್ಯಾರ್ಥಿ ನಾಯಕರಿಗೆ ಪ್ರಮಾಣ ವಚನ ಬೋಧಿಸಿದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಭಾಕರ ಪ್ರಭು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಶೀನಪ್ಪ ಎನ್. ಮತ್ತಿತರರು ಇದ್ದರು. ಹಿರಿಯ ಉಪನ್ಯಾಸಕ ಶ್ರೀನಿವಾಸ ನಾಯ್ಕ ಸ್ವಾಗತಿಸಿ, ಉಪನ್ಯಾಸಕಿ ರೇಖಾ ಬಾಳಿಗಾ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿ ಸಂಘದ ನಾಯಕ ಲತೀಶ್ ವಂದಿಸಿದರು. ಉಪನ್ಯಾಸಕ ಸಂಜಯ್ ಬಿ.ಎಸ್. ಕಾರ್ಯಕ್ರಮ ನಿರೂಪಿಸಿದರು.