ಮುತ್ತೂರು ದ್ವಿತೀಯ ಪಿಯುಸಿ ಸಾಧಕರಿಗೆ ಸನ್ಮಾನ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ
ಕೈಕಂಬ: ಮುತ್ತೂರು ಸರ್ಕಾರಿ ಪದವಿಪೂರ್ವ ಕಾಲೇಜು ಮುತ್ತೂರಿನ ಈ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಮಂತ್ರಿಮಂಡಲದ ಉದ್ಘಾಟನೆ ಹಾಗೂ ಪ್ರಮಾಣವಚನ ಸ್ವೀಕಾರ, ದ್ವಿತೀಯ ಪಿಯುಸಿ ಸಾಧಕರಿಗೆ ಸನ್ಮಾನ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ಜರಗಿತು.

ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಆಳ್ವ ವಹಿಸಿ,ದೀಪ ಬೆಳಗಿಸಿ ಶುಭ ಹಾರೈಸಿದರು.ಮುತ್ತೂರು ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸೂರ್ಯಕಾಂತ ಸಾಗಾವೆಯವರು ಸಾಧಕ ವಿದ್ಯಾರ್ಥಿಗಳಿಗೆ ಬ್ಯಾಂಕ್ ವತಿಯಿಂದ ನಗದು ಪುರಸ್ಕಾರ ನೀಡಿ ಗೌರವಿಸಿದರು. ಬೆಂಗಳೂರಿನ ನಿವೃತ್ತ ಪ್ರಾಂಶುಪಾಲರಾದ ಲಲಿತಾ ರವರು ಸಾಧಕ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಿ ಶುಭಹಾರೈಸಿದರು.
ನಾಗೇಶ್ ಶೆಟ್ಟಿ, ಚಂದ್ರಹಾಸ ಶೆಟ್ಟಿ, ಮೊಹಮ್ಮದ್ ಶಾಲಿ, ಹಂಝಾ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಎಲ್ಲ ಉಪನ್ಯಾಸಕರು ಸಹಕರಿಸಿದರು. ರಾಷ್ಟ್ರಗೀತೆಯೊಂದಿಗೆ ಸಮಾರಂಭವು ಸಂಪನ್ನಗೊಂಡಿತು.
ಪ್ರಾಂಶುಪಾಲರಾದ ರಘುರಾಮ ಸ್ವಾಗತಿಸಿ, ಪ್ರಮಾಣ ವಚನ ಬೋಧಿಸಿದರು. ಉಪನ್ಯಾಸಕ ನಿರಂಜನ್ ನಿರ್ವಹಿಸಿದರು.