ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ
ಬಂಟ್ವಾಳ: ರೋಟರಿ ಕ್ಲಬ್ ಸಂಸ್ಥೆಯು ನೈಜ ಕಾಳಜಿಯಿಂದ ಜನರ ಸಂಕಷ್ಟಗಳಿಗೆ ಸ್ವಯಂ ಪ್ರೇರಿತರಾಗಿ ಸ್ಪಂದಿಸಿದಾಗ ದೇವರು ಕೂಡಾ ಮೆಚ್ಚುವುದರ ಜೊತೆಗೆ ಪರಸ್ಪರ ಶಾಂತಿ ಸೌಹಾರ್ದತೆಯ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ರೋಟರಿ 3181 ಜಿಲ್ಲಾ ಗವರ್ನರ್ ಸುರೇಶ್ ಚೆಂಗಪ್ಪ ಹೇಳಿದ್ದಾರೆ.ಇಲ್ಲಿನ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ನಡೆದ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕ್ಲಬ್ಬಿನ ಅಧ್ಯಕ್ಷ ಸುರೇಶ ಶೆಟ್ಟಿ ಸಿದ್ಧಕಟ್ಟೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಪರಿಸರ ಸಂರಕ್ಷಣೆ ಜೊತೆಗೆ ರೂ 50 ಸಾವಿರ ಮೊತ್ತದ ‘ನರ್ಸರಿ ಹಣ್ಣಿನ ಗಿಡ’ಗಳನ್ನು ಸ್ಥಳೀಯ ಶಾಲೆಗಳಲ್ಲಿ ನೆಟ್ಟು ಪೋಷಿಸಲಾಗುವುದು’ ಎಂದರು. ಇದೇ ವೇಳೆ ನಿವೃತ್ತ ಸೈನಿಕ ಸುಬೇದಾರ್ ಸುಧಾಕರ್ ಕೆ. ದಂಪತಿಗೆ ಸನ್ಮಾನ, ವಿವಿಧ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ನೆರವು, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.
ಸಹಾಯಕ ಗವರ್ನರ್ ಡಾ.ಮುರಳಿಕೃಷ್ಣ, ವಲಯ ಸೇನಾನಿ ಗಣೇಶ ಶೆಟ್ಟಿ ಆರಂಬೋಡಿ, ಮಾಜಿ ವಲಯ ಸೇನಾನಿ ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ, ಕ್ಲಬ್ಬಿನ ಸ್ಥಾಪಕಾಧ್ಯಕ್ಷ ಅವಿಲ್ ಮಿನೇಜಸ್ ಶುಭ ಹಾರೈಸಿದರು.ಕ್ಲಬ್ಬಿನ ಮಾಜಿ ಕಾರ್ಯದಶರ್ಿ ಐವನ್ ಮಿನೇಜಸ್, ಅರುಣಾ ಸುರೇಶ ಶೆಟ್ಟಿ ಸಿದ್ಧಕಟ್ಟೆ ಮತ್ತಿತರರು ಇದ್ದರು.
ಕ್ಲಬ್ಬಿನ ಮಾಜಿ ಅಧ್ಯಕ್ಷ ರಾಮಚಂದ್ರ ಶೆಟ್ಟಿಗಾರ್ ಸ್ವಾಗತಿಸಿ, ಕಾರ್ಯದಶರ್ಿ ರಾಜೇಶ ಶೆಟ್ಟಿ ಸೀತಾಳ ವಂದಿಸಿದರು. ನಿವೃತ್ತ ಮುಖ್ಯಶಿಕ್ಷಕ ಕೆ.ರಮೇಶ ನಾಯಕ್ ರಾಯಿ ಕಾರ್ಯಕ್ರಮ ನಿರೂಪಿಸಿದರು.
–