ಬಂಟ್ವಾಳ: ವಯಕ್ತಿಕ ವಿಚಾರಗಳನ್ನು ಪಕ್ಷದ ವೇದಿಕೆಗೆ ತಾರದೆ ಸಿದ್ದಾಂತಕ್ಕೆ ಬದ್ದರಾಗಿದ್ದುಕೊಂಡು‌ ಬಂಟ್ವಾಳ ಕ್ಷೇತ್ರದಲ್ಲಿಯು ಎಲ್ಲರೂ ಒಗ್ಗಟ್ಟಾಗಿ ಪಕ್ಷವನ್ನು ಬಲಪಡಿಸುವ ಮಹತ್ತರ ಜವಾಬ್ದಾರಿ ನಮ್ಮ ಮೇಲಿದ್ದು, ಈ ನಿಟ್ಟಿನಲ್ಲಿ ನೂತನ ಪದಾಧಿಕಾರಿಗಳು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರಿಯಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಹೇಳಿದರು.

ಬಿ ಸಿ ರೋಡಿನ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ನೂತನ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ  ಮಾತನಾಡಿದ ಅವರು ಸಂಘಟನಾತ್ಮಕವಾಗಿ ಬೂತ್ ಸಮಿತಿಗಳನ್ನು ರಚಿಸುವ ದೃಷ್ಟಿಯಿಂದ ಮಹಾಶಕ್ತಿ ಕೇಂದ್ರಕ್ಕೆ ಪ್ರಭಾರಿಗಳನ್ನು ನೇಮಿಸಲಾಗಿದೆ ಎಂದರು.

ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ  ಆರ್ ಚೆನ್ನಪ್ಪ ಕೋಟ್ಯಾನ್ ಅವರು‌ ಅಧ್ಯಕ್ಷತೆ ವಹಿಸಿ ಪಕ್ಷ ಸಂಘಟನೆಯ ಬಗ್ಗೆ ಮಾಹಿತಿ‌ನೀಡಿದರು.ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ , ಜಿಲ್ಲಾ ಉಪಾಧ್ಯಕ್ಷೆ ಪೂಜಾ ಪೈ , ಜಿಲ್ಲಾ ಕಾರ್ಯದರ್ಶಿಗಳಾದ ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು  ಜಿಲ್ಲಾ ವಕ್ತಾರ ಡೊಂಬಯ ಅರಳ,ಮಂಡಲದ ಪ್ರಧಾನ ಕಾರ್ಯದರ್ಶಿ ಗಳಾದ ಸುದರ್ಶನ್ ಬಜ , ಶಿವಪ್ರಸಾದ್  ಶೆಟ್ಟಿ ವೇದಿಕೆಯಲ್ಲಿದ್ದರು. 

By suddi9

Leave a Reply

Your email address will not be published. Required fields are marked *