ಮೂಡುಪಡುಕೋಡಿ ಸ.ಹಿ.ಪ್ರಾ.ಶಾಲೆ :ಆಂಗ್ಲ ಮಾದ್ಯಮ ತರಗತಿ ಉದ್ಘಾಟನೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಆಂಗ್ಲ ಭಾಷಾ ಕಲಿಕೆ ಅಗತ್ಯ:ರಾಜೇಶ್ ನಾಯ್ಕ್
ಬಂಟ್ವಾಳ: ಆಧುನಿಕ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಎದುರಿಸುವ ಅಗತ್ಯತೆ ಇರುವುದರಿಂದ ಆಂಗ್ಲ ಭಾಷಾ ಕಲಿಕೆ ಅಗತ್ಯವಾಗಿದ್ದು, ಮೂಡುಪಡುಕೋಡಿಯಂತಹ ಗ್ರಾಮೀಣ ಪರಿಸರದಲ್ಲಿ ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಗೊಂಡಿರುವುದು ವಿದ್ಯಾರ್ಥಿಗಳಿಗೆ ವರದಾನವಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.
ಅವರು ಶುಕ್ರವಾರ ಸರಕಾರದಿಂದ ನೂತನವಾಗಿ ಅನುಮೋದನೆಗೊಂಡ ಬಂಟ್ವಾಳ ತಾಲೂಕಿನ ಮೂಡುಪಡುಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಂಗ್ಲ ಮಾಧ್ಯಮ ವಿಭಾಗವನ್ನು ಉದ್ಘಾಟಿಸಿ ಮಾತನಾಡಿದರು.
ಸರಕಾರಿ ಶಾಲೆಯಲ್ಲಿ ಮಕ್ಕಳ ಹಾಜರಾತಿ ಹೆಚ್ಚಬೇಕು, ಸರಕಾರಿ ಶಾಲೆಯ ಮಕ್ಕಳೂ ಇಂಗ್ಲಿಷ್ ಕಲಿಯಬೇಕು ಎಂಬ ಉದ್ದೇಶದಿಂದ ಸರಕಾರ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಿದೆ. ಶಾಲೆಗೆ ಆವಶ್ಯವಿರುವ ಕೊಠಡಿಗಳ ನಿರ್ಮಾಣಕ್ಕೆ ಸರಕಾರದಿಂದ ಹಾಗೂ ತನ್ನ ವೈಯ್ಯಕ್ತಿಕ ನೆಲೆಯಲ್ಲಿ ಸಹಕಾರ ನೀಡುವುದಾಗಿ ಅವರು ಭರವಸೆ ನೀಡಿದರು.
ಇರ್ವತ್ತೂರು ಗ್ರಾ.ಪಂ. ಅಧ್ಯಕ್ಷೆ ಮಾಲತಿ, ಉಪಾಧ್ಯಕ್ಷೆ ಹರಿಣಾಕ್ಷಿ ನಾಗೇಶ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸುರೇಶ್ ಕಯ್ಯಬೆ, ಉಪಾಧ್ಯಕ್ಷೆ ಶಾಲಿನಿ, ಬಂಟ್ವಾಳ ಕ್ಷೇತ್ರಶಿಕ್ಷಣಾಧಿಕಾರಿ ಕಛೇರಿ ಶಿಕ್ಷಣ ಸಂಯೋಜಕಿ ಸುಜಾತಾ ಭಟ್, ಸಿಆರ್‌ಪಿ ಜ್ಯೋತಿ, ಮುಖ್ಯ ಶಿಕ್ಷಕಿ ಐರಿನ್ ಮಿರಾಂದ, ಹಳೇವಿಧ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ್ ಶೆಟ್ಟಿ ಬಜೆ,ಕಾರ್ಯದರ್ಶಿ ಸುಪ್ರೀತ್ ಜೈನ್, ಇರ್ವತ್ತೂರು ಗ್ರಾ.ಪಂ. ಸದಸ್ಯರಾದ ದಯಾನಂದ ಎರ್ಮೆನಾಡ್, ಶುಭಕರ ಶೆಟ್ಟಿ ಮಠ,ಸುಧಿಂದ್ರ ಶೆಟ್ಟಿ , ಪ್ರಶಾಂತ್ ಜೈನ್,ವಿಜಯಾ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಲೋಕೇಶ್ ಎರ್ಮೆನಾಡು, ಹರೀಶ್ ಎರ್ಮೆನಾಡ್, ನವೀನ್ ಸೇವಾ, ವಿಜಯ,ಸೇಸಪ್ಪ ,ಶ್ರೀನಿವಾಸ , ಪ್ರಮುಖರಾದ ಡಾ.ರಾಮಕೃಷ್ಣ ಎಸ್, ಶಂಕರ್ ಶೆಟ್ಟಿ ಬೆದ್ರಮಾರ್,ಸತೀಶ್ ಕರ್ಕೇರ ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿಯವರು ಶಾಲಾ ಬೇಡಿಕೆಗಳ ಮನವಿಯನ್ನು ಶಾಸಕರಿಗೆ ಸಲ್ಲಿಸಿದರು.ವನಮಹೋತ್ಸವ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಸಿ ವಿತರಿಸಲಾಯಿತು.
ರಾಜೀವ ಶೆಟ್ಟಿ ಎಡ್ತೂರು ಸ್ವಾಗತಿಸಿದರು. ದೈಹಿಕ ಶಿಕ್ಷಕ ಸುರೇಶ್ ವಂದಿಸಿದರು.