ಬಂಟ್ವಾಳ,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರ ನೇಮಕ
ಬಂಟ್ವಾಳ: ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ನ ಅವಧಿ ಮುಗಿದಿರುವ ಹಿನ್ನಲೆಯಲ್ಲಿ ಎರಡುಬ್ಲಾಕ್ ಕಾಂಗ್ರೆಸ್ ಗೆ ನೂತನ ಅಧ್ಯಕ್ಷರನ್ನು ನೇಮಕಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಬಾಲಕೃಷ್ಣ ಆರ್.ಅಂಚನ್ ಕಾವಳಮೂಡೂರು ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾಗಿ ಚಂದ್ರಶೇಖರ ಭಂಡಾರಿ ಅಮ್ಮುಂಜೆ ಅವರು ನೇಮಕಗೊಂಡಿದ್ದಾರೆ. ಭಾನುವಾರ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನೂತನ ಅಧ್ಯಕ್ಷರಿಬ್ಬರ ಹೆಸರನ್ನು ಮಾಜಿ ಸಚಿವ ರಮಾನಾಥ ರೈ ಅವರು ಪ್ರಕಟಿಸಿದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬೇಬಿಕುಂದರ್, ಸುದೀಪ್ ಕುಮಾರ್ ರೈ,ಪಕ್ಷದ ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ,ಪಿಯೂಸ್ ಎಲ್ ರೋಡ್ರಿಗಸ್,ಅಬ್ಬಾಸ್ ಆಲಿ, ಎಂ.ಎಸ್.ಮಹಮ್ಮದ್ ,ಸುದರ್ಶನ್ ಜೈನ್, ಜಯಂತಿ ಪೂಜಾರಿ,ಸುರೇಶ್ ಜೋರ,ನವಾಜ್ ಬಡಕಬೈಲ್ ಮೊದಲಾದವರಿದ್ದರು.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಬೇಬಿಕುಂದರ್ ಅವರು ಪ್ರಸ್ತುತ ಬಂಟ್ವಾಳ ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾರೆ.