ಪೋಕ್ಸೋ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಗ್ಗೆ ಕಾನೂನು ಅರಿವು ಜಾಗೃತಿ ಕಾರ್ಯಕ್ರಮ
ಬಂಟ್ವಾಳ :ತುಂಬೆ ಬಿ.ಎ ವಿದ್ಯಾ ಸಂಸ್ಥೆಯ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಕ್ಸೋ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಗ್ಗೆ ಕಾನೂನು ಅರಿವು ಜಾಗೃತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾ ಕೆ. ಅವರು ಮಾತನಾಡಿ ಮಕ್ಕಳ ಮೇಲೆ ನಡೆಯುವ ಲೈಂಗಿಕ ಅಪರಾಧ, ಶೋಷಣೆ ಮತ್ತು ಅತ್ಯಾಚಾರಗಳನ್ನು ಪರಿಣಾಮಕಾರಿಯಾಗಿ ತಡೆಯುವುದು ನಿಟ್ಟಿನಲ್ಲಿ ಪೋಕ್ಸೋ ಕಾಯ್ದೆ ಜಾರಿಗೆ ಬಂದಿದೆ.ಬಾಲ್ಯ ವಿವಾಹ ನಿಷೇಧ ಕಾಯ್ದೆಯು ಕಾನೂನಿನ ವಯಸ್ಸಿನ ಮಿತಿಗಿಂತ ಕೆಳಗಿನ ಮಕ್ಕಳ ನಡುವೆ ನಡೆಯುವ ಯಾವುದೇ ವಿವಾಹವು ಅನೂರ್ಜಿತವಾಗಿದೆ ಎಂದು ಹೇಳಿದರು.
ವಿದ್ಯಾ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಜಗದೀಶ್ ರೈ ಬಿ. ಮಾತನಾಡಿ,ಪೋಕ್ಸೋ ಕಾಯ್ದೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತ ಕಾನೂನು ಅರಿವು ಪ್ರಸಕ್ತ ದಿನಗಳಲ್ಲಿ ಅತೀ ಮುಖ್ಯವಾಗಿದೆಯಲ್ಲದೆ ಈ ಕಾಯಿದೆಯ ಬಗ್ಗೆ ತಿಳಿದುಕೊಳ್ಳುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವು ಆಗಿದೆ ಎಂದು ಹೇಳಿದರು.
ವಿದ್ಯಾ ಸಂಸ್ಥೆಯ ಶಿಕ್ಷಕ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕ ನವೀನ ರಾವ್ ಟಿ. ಸ್ವಾಗತಿಸಿ, ಶಿಕ್ಷಕಿ ಸೌಮ್ಯ ವಂದಿಸಿದರು. ಅಧ್ಯಾಪಕ ರಮೇಶ್ ಕಾರ್ಯಕ್ರಮ ನಿರೂಪಿಸಿದರು.