ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ 15ನೇ ವೇಣೂರು ಶಾಖೆ ಉದ್ಘಾಟನೆ
ಬಂಟ್ವಾಳ:ಜಿಲ್ಲೆಯಲ್ಲಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ ವಿಸ್ತರಣೆ ಮೂಲಕ ಆರ್ಥಿಕವಾಗಿ ಸದೃಢ ಸಮಾಜ ನಿರ್ಮಾಣದ ಜೊತೆಗೆ ಶೋಷಣೆಮುಕ್ತ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಇಲ್ಲಿನ ಸಜಿಪಮುನ್ನೂರು ಮೂತರ್ತೆದಾರರ ಸೇವಾ ಸಹಕಾರಿ ಸಂಘದ 15ನೇ ವೇಣೂರು ಶಾಖೆಯನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಠೇವಣಿ ಪತ್ರ ವಿತರಿಸಿದರು. ನಾರಾಯಣ ಗುರು ವಿಚಾರ ವೇದಿಕೆ ರಾಜಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಕಂಪ್ಯೂಟರ್ ವ್ಯವಸ್ಥೆಗೆ ಚಾಲನೆ ನೀಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಪಾಸ್ ಬುಕ್ ವಿತರಿಸಿದರು.
ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೋಕ್ತೇಸರ ಜಯರಾಮ ಶೆಟ್ಟಿ ಸೇಫ್ ಲಾಕರ್ ಉದ್ಘಾಟಿಸಿದರು. ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ವೇಣೂರು ವಲಯ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ, ವೇಣೂರು ಜುಮ್ಮಾ ಮಸೀದಿ ಅಧ್ಯಕ್ಷ ಝಕ್ರಿಯಾ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರತಿಮಾ, ವೇಣೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ಪೂಜಾರಿ, ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ ರಾಯಿ, ಕಟ್ಟಡ ಮಾಲೀಕ ಕೆ. ಉದಯ ಕುಮಾರ್ ಕಂಬಳಿ ಶುಭ ಹಾರೈಸಿದರು.
ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಘದಲ್ಲಿ ಸಿಇಒ ಸಹಿತ ಒಟ್ಟು 40 ಮಂದಿ ಮಹಿಳಾ ಸಿಬ್ಬಂದಿಗಳು ಮಾತ್ರ ಇದ್ದಾರೆ ಎಂದರು.ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ ಬೀಡಿನಪಾಲು, ನಿರ್ದೇಶಕರಾದ ರಮೇಶ್ ಅನ್ನಪ್ಪಾಡಿ, ವಿಠಲ ಬೆಳ್ಚಡ ಚೇಳೂರು, ಅಶೋಕ್ ಪೂಜಾರಿ ಕೋಮಾಲಿ, ಗಿರೀಶ್ ಕುಮಾರ್ ಪೆರ್ವ, ಜಯಶಂಕರ್ ಕಾನ್ಸಾಲೆ, ಕೆ. ಸುಜಾತ ಎಂ., ವಾಣಿ ವಸಂತ್, ಅರುಣ್ ಕುಮಾರ್ ಎಂ., ಆಶಿಶ್ ಪೂಜಾರಿ, ಸಿಇಒ ಮಮತಾ ಜಿ. ಇದ್ದರು.
ನಿರ್ದೇಶಕ ಗಿರೀಶ್ ಕುಮಾರ್ ಪೆರ್ವ ಸ್ವಾಗತಿಸಿ, ವ್ಯವಸ್ಥಾಪಕಿ ವಿಜಯಾ.ಕೆ ವಂದಿಸಿದರು. ಪತ್ರಕರ್ತ ಗೋಪಾಲ ಅಂಚನ್ ಕಾರ್ಯಕ್ರಮ ನಿರೂಪಿಸಿದರು