“ಹಸಿರು ನೈರ್ಮಲ್ಯ ಅಭ್ಯುದಯ ಶಾಲಾ ಪ್ರಶಸ್ತಿ – 2024” ಕ್ಕೆ ಬಂಟ್ವಾಳ ತಾಲೂಕಿನ ಏಮಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಆಯ್ಕೆ
ಬಂಟ್ವಾಳ:ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ಸರಕಾರಿ ಶಾಲೆಗಳ ಹಸಿರು ಹಾಗೂ ನೈರ್ಮಲತೆಯನ್ನು ಗುರುತಿಸಿ ಕೊಡುವಂತಹ “ಹಸಿರು ನೈರ್ಮಲ್ಯ ಅಭ್ಯುದಯ ಶಾಲಾ ಪ್ರಶಸ್ತಿ – 2024” ಕ್ಕೆ ಬಂಟ್ವಾಳ ತಾಲೂಕಿನ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಏಮಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.
ಸರಕಾರಿ ಶಾಲೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸ್ವಚ್ಛತೆ ಮತ್ತು ಸುಸ್ಥಿರತೆಯಲ್ಲಿ ಉತ್ತಮ ಸಾಧನೆ ಮಾಡಿರುವ ಶಾಲೆಗಳನ್ನು ಆಯ್ಕೆ ಮಾಡಿ ಪ್ರತಿವರ್ಷ ಈ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿಗೆ ಆಯ್ಕೆಯಾಗಲು 22 ಮಾನದಂಡಗಳಿದ್ದು, ಟ್ರಸ್ಟ್‌ನ ತಂಡ ಅರ್ಜಿ ಸಲ್ಲಿಸಿದ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆಯ ಬಳಿಕ ಪ್ರಶಸ್ತಿಗಳಿಗೆ ಆಯ್ಕೆ ನಡೆಯುತ್ತದೆ.
ಈ ನಿಟ್ಟಿನಲ್ಲಿ ಪ್ರಶಸ್ತಿಗೆ ಏಮಾಜರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿದ್ದು,ಜು. 27 ರಂದು ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.