ಇಂಟರಾಕ್ಟ್ ಕ್ಲಬ್ ಪದಗ್ರಹಣ ಕಾರ್ಯಕ್ರಮ
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಇದರ ಆಶ್ರಯದಲ್ಲಿ ಇಂಟರಾಕ್ಟ್ ಕ್ಲಬ್ ಪದಗ್ರಹಣ ಕಾರ್ಯಕ್ರಮ ನಡೆಯಿತು.ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಬೇಬಿ ಕುಂದರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಲಾ ಕಾಲೇಜುಗಳಲ್ಲಿ ಸೇವಾಕಾರ್ಯ ಹಾಗೂ ನಾಯಕತ್ವ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ದಾರಿದೀಪವಾಗಲಿದೆ ಎಂದರು.

ಜಿಲ್ಲಾ ಇಂಟರಾಕ್ಟ್ ಅಧ್ಯಕ್ಷ ಜಯಕುಮಾರ್ ಶೆಟ್ಟಿ ಅವರು ಪದಗ್ರಹಣ ಅಧಿಕಾರಿಯಾಗಿ ಭಾಗವಹಿಸಿ ಇಂಟರಾಕ್ಟ್ ಅಧ್ಯಕ್ಷರಿಗೆ ಪ್ರಮಾಣ ವಚನ ಭೋದಿಸಿದರು.ಬಂಟ್ವಾಳ ವಲಯ ಅರಣ್ಯಧಿಕಾರಿ ಪ್ರಫುಲ್ ಶೆಟ್ಟಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿ 100 ಸಸಿ ವಿತರಣೆಗೈದರು.
ಜಿಲ್ಲಾ ರೋಟರಿ ಕಾರ್ಯದರ್ಶಿ ರಿತೇಶ್ ಬಾಳಿಗ, ಕ್ಲಬ್ ಜತೆಕಾರ್ಯದರ್ಶಿ ವೀರೇಂದ್ರ ಅಮೀನ್, ಕ್ಲಬ್ ಇಂಟರಾಕ್ಟ್ ಅಧ್ಯಕ್ಷ ಸ್ಟೀವನ್ ಡಿಸೋಜ, ಕ್ಲಬ್ ನಿಕಟ ಪೂರ್ವ ಅಧ್ಯಕ್ಷ ಪ್ರಕಾಶ್ ಬಾಳಿಗ, ರೋಟರಿಯನ್ ಗಳಾದಸದಾಶಿವ ಬಾಳಿಗ, ಮೊಹಮ್ಮದ್ ಇಕ್ಬಾಲ್, ರಾಮಣ್ಣ ರೈ, ಮೊಹಮ್ಮದ್ ಮುಸ್ತಫಾ, ಭಾರತೀ ಬಿ. ಕುಂದರ್ ಉಪಸ್ಥಿತರಿದ್ದರು.