ಬಂಟ್ವಾಳ:ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಹಿಂದೂ ಧರ್ಮದ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ. ಹಿಂದೂ ಧರ್ಮದಲ್ಲಿಅಹಿಂಸೆಗೆ ಎಂದಿಗೂ ಅವಕಾಶ ಇಲ್ಲ ಎಂಬುದನ್ನು ಮಾತ್ರ ಅವರು ಹೇಳಿರುವ ಬಗ್ಗೆ ಸಂಸತ್ತಿನ ಕಡತದಲ್ಲಿ ದಾಖಲಾಗಿದೆ.

ಆದರೆ ವಿರೋಧಿಗಳು ರಾಜಕೀಯ ಪ್ರೇರಿತವಾಗಿ ರಾಹುಲ್ ಗಾಂಧಿ ಅವರು ಹಿಂದೂ ಧರ್ಮದ ಅವಹೇಳನ ಮಾಡಿದ್ದಾರೆ ಎಂದು ಅಪ ಪ್ರಚಾರ ನಡೆಸುತ್ತಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಆರೋಪಿಸಿದ್ದಾರೆ.


ಇಲ್ಲಿನ ಇತಿಹಾಸ ಪ್ರಸಿದ್ಧ ಪೊಳಲಿ ಕ್ಷೇತ್ರಕ್ಕೆ ಸೋಮವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅವರು ಹೊರಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.


ಧಾಮರ್ಿಕ ಕ್ಷೇತ್ರಗಳಲ್ಲಿ ರಾಜಕೀಯ ಸಲ್ಲದು ಎಂದು ಹೇಳಿದ ಅವರು ಈ ಹಿಂದೆ ನನ್ನ ವಿರುದ್ಧವೂ ಅಪ ಪ್ರಚಾರ ನಡೆಸಿದ್ದ ಬಿಜೆಪಿ ಈಗ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಅಪ ಪ್ರಚಾರ ನಡೆಸುತ್ತಿದ್ದಾರೆ. ಈ ರೀತಿ ಸುಳ್ಳು ಹೇಳುವವರನ್ನು ದೇವರೇ ನೋಡಿಕೊಳ್ಳುತ್ತಾರೆ ಎಂದು ಅವರು ಹೇಳಿದರು.


ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಬಿ.ಪದ್ಮಶೇಖರ ಜೈನ್, ಚಂದ್ರಪ್ರಕಾಶ ಶೆಟ್ಟಿ, ಬೂಡ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಾಲಕೃಷ್ಣ ಅಂಚನ್, ಚಂದ್ರಶೇಖರ ಭಂಡಾರಿ ಅಮ್ಮುಂಜೆ, ಪ್ರಮುಖರಾದ ಸುದರ್ಶನ್ ಜೈನ್, ಕೆ.ಪದ್ಮನಾಭ ರೈ, ಸುಧಾಕರ ಶೆಣೈ ಖಂಡಿಗ, ಸುಧೀಪ್ ಕುಮಾರ್ ಶೆಟ್ಟಿ, ಕೆ.ಮಾಯಿಲಪ್ಪ ಸಾಲ್ಯಾನ್, ಚಿತ್ತರಂಜನ್ ಶೆಟ್ಟಿ ಬೊಂಡಾಲ, ಸಂಪತ್ ಕುಮಾರ್ ಶೆಟ್ಟಿ, ಮಲ್ಲಿಕಾ ಶೆಟ್ಟಿ, ಜಯಂತಿ ಪೂಜಾರಿ, ಜನಾರ್ದನ ಚೆಂಡ್ತಿಮಾರ್, ಸುರೇಶ ಕುಮಾರ್ ನಾವೂರು, ವೀರೇಂದ್ರ ಅಮೀನ್, ಶಿವಪ್ರಸಾದ್ ಕನಪಾಡಿ, ಮಧುಸೂಧನ್ ಶೆಣೈ, ಮನೋಹರ ನೆರಂಬೋಳು, ರೋಶನ್ ರೈ, ಜಯಕರ ಶೆಟ್ಟಿ, ಪ್ರಶಾಂತ್ ಪಕ್ಕಳ ಮತ್ತಿತರರು ಇದ್ದರು… click here 👇👇👇👇

By Suddi9

Leave a Reply

Your email address will not be published. Required fields are marked *