ಬಿ.ಮೂಡ ಸರಕಾರಿ ಪ.ಪೂ.ಕಾಲೇಜಿನಲ್ಲಿಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ ),ಬಂಟ್ವಾಳ ಪ್ರಗತಿ ಬಂದು ಸ್ವ ಸಹಾಯ ಸಂಘಗಳ ಒಕ್ಕೂಟ ಪಾಣೆಮಂಗಳೂರು ವಲಯ, ಸರಕಾರಿ ಪದವಿ ಪೂರ್ವ ಕಾಲೇಜು ಬಿ ಮೂಡ ಇವುಗಳ ಸoಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತು.
ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿ ಮೆಲ್ಕಾರ್ ಕಾರ್ಯಕ್ರಮ ಉದ್ಘಾಟಿಸಿ ಕಾರ್ಯಕ್ರಮದ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಂಡು ತಮ್ಮ ಜೀವನದಲ್ಲಿ ಅನುಷ್ಠಾನ ಮಾಡುವಂತೆ ತಿಳಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಜನಜಾಗೃತಿ ವೇದಿಕೆ ಸದಸ್ಯ ಜಗದೀಶ್ ನೆಲ್ಲಿಕಟ್ಟೆ ಮಾತಾಡಿ ನಮ್ಮ ಜೀವನದಲ್ಲಿ ಗುರಿ ಇಟ್ಟುಕೊಂಡಾಗ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದರಲ್ಲದೆ ದುಶ್ಚಟದಿಂದ ಆಗುವ ತೊಂದರೆ ಹಾಗೂ ಇದನ್ನು ಬಗೆಹರಿಸುವ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಉಪನ್ಯಾಸಕರಾದ ದಾಮೋದರ ವಹಿಸಿದರು .
ತಾಲೂಕಿನ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ರೋನಾಲ್ಡ್ ಡಿಸೋಜ, ಗ್ರಾಮಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ, ಒಕ್ಕೂಟದ ಅಧ್ಯಕ್ಷರಾದ ವಸಂತಿ ಗಂಗಾಧರ್, ಜನಜಾಗೃತಿ ಸದಸ್ಯರಾದ ಡಾ. ಜಗದೀಶ್ ಭಟ್ ಉಪಸ್ಥಿತರಿದ್ದರು.
ಪ್ರಿಯಾಂಕ ಎಸ್ ಅಮೀನ್ ಹಾಗೂ ಬಳಗದವರು ಪ್ರಾರ್ಥಿಸಿ,ಸೇವಾಪ್ರತಿನಿಧಿ ಸುಲೋಚನಾ ಸ್ವಾಗತಿಸಿದರು . ಎನ್. ಎಸ್.ಎಸ್ ಯೋಜನಾಧಿಕಾರಿ ಬಾಲಕೃಷ್ಣ ನಾಯ್ಕ್ ವಂದಿಸಿದರು,ವಲಯ ಮೇಲ್ವಿಚಾರಕರಾಕಿ ಅಮಿತಾ ಕಾರ್ಯಕ್ರಮ ನಿರೂಪಿಸಿದರು.