ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್, ನಾಳೆ ಶಾಲಾ ಕಾಲೇಜುಗಳಿಗೆ ರಜೆ

ಕಳೆದ ಒಂದೆರಡು ದಿನಗಳಿಂದ ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಆ. 2ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಆದೇಶ ನೀಡಿದ್ದಾರೆ.
ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು ತುಂಬಿ ಹರಿಯುತ್ತಿದ್ದು ಅಗಸ್ಟ್ 2 ರಂದು ಕೂಡ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಕಾಲೇಜುಗಳು ಎಂದಿನಂತೆ ನಡೆಯಲಿದೆ.