ಮಂಗಳೂರು: ದಕ್ಷಿಣ ಕನ್ನಡದ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ(ಆ.02)ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ ಸೇರಿದಂತೆ ದ್ವಿತೀಯ ಪಿಯುಸಿವರೆ ಶಾಲಾ ಕಾಲೇಜಿಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ.