ನಡು ರಸ್ತೆಯಲ್ಲೇ ವಿಧ್ಯಾರ್ಥಿಗಳ ಗುಂಪೊಂದು ಹೊಡೆದಾಡಿಕೊಂಡ ಘಟನೆ ಮಂಗಳೂರಿನ ಪ್ರತಿಷ್ಠಿತ ಅಲೋಶಿಯಸ್ ಕಾಲೇಜು ಬಳಿ ನಡೆದಿದೆ. ಕಾಲೇಜು ಗೇಟ್ ಎದುರಿನ ರಸ್ತೆಯಲ್ಲಿ ಕಾಲೇಜು ವಿಧ್ಯಾರ್ಥಿಗಳು ನಡುವೆ ಗಲಾಟೆ ನಡೆದಿದ್ದು, ಮನಬಂದಂತೆ ಹೊಡೆದಾಡಿಕೊಂಡಿದ್ದಾರೆ.

ಹೌದು, ಕಾಲೇಜು ಬಿಟ್ಟ ಬಳಿಕ ಕ್ಷುಲ್ಲಕ ಕಾರಣಕ್ಕಾಗಿ ಗೆಳೆಯರ ಮಧ್ಯೆಯೇ ಮಾತಿಗೆ ಮಾತು ಬೆಳೆದು ಹೊಡೆದಾಡುವ ಹಂತಕ್ಕೆ ತಲುಪಿದೆ. ಕಾಲೇಜು ಯೂನಿಫಾರಂನಲ್ಲೇ ಇದ್ದ ವಿದ್ಯಾರ್ಥಿಗಳ ನಡುವೆ ಗಲಾಟೆಯೂ ನಡೆಯುತ್ತಿದ್ದಂತೆ, ಉಳಿದ ವಿದ್ಯಾರ್ಥಿಗಳು ಮೂಕಪ್ರೇಕ್ಷಕರಾಗಿ ನಿಂತಿದ್ದು, ಈ ಘಟನೆಯ ವಿಡಿಯೋವೊಂದು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.

By suddi9

Leave a Reply

Your email address will not be published. Required fields are marked *