ಮಂಗಳೂರು: ಟೈಗರ್ ಕಾರ್ಯಾಚರಣೆಯ ವೇಳೆ ಅಧಿಕಾರಿಗಳ ತಾರತಮ್ಯ, ಬೀದಿಬದಿ ವ್ಯಾಪಾರಸ್ಥರ ಸಂಘದಿಂದ ಪ್ರತಿಭಟನೆ
ಬೀದಿ ಬದಿಯಲ್ಲಿ ಅನಧಿಕೃತ ಗೂಡಂಗಡಿಗಳು ನಿಯಮ ಮೀರಿ ಅಂಗಡಿ ವಿಸ್ತರಣೆ ಮಾಡಿದ್ದು, ಮಂಗಳೂರು ಪಾಲಿಕೆ ಅಧಿಕಾರಿಗಳಿಂದ ಟೈಗರ್ ಕಾರ್ಯಾಚರಣೆ ಶುಕ್ರವಾರವೂ ನಡೆದಿದೆ. ಆದರೆ ಈ ಕಾರ್ಯಾಚರಣೆಯಲ್ಲಿ ಅಧಿಕಾರಿಗಳು ಆಡಳಿತ ಪಕ್ಷ ಬಿಜೆಪಿ ಪರವಾಗಿರುವವರ ಅಂಗಡಿ ತೆರವುಗೊಳಿಸದೇ ತಾರತಮ್ಯ ಎಸಗಿರುವ ಆರೋಪವೊಂದು ಕೇಳಿ ಬಂದಿದೆ.
ಅಧಿಕಾರಿಗಳ ಈ ತಾರತಮ್ಯ ವಿರೋಧಿಸಿ ಬೀದಿಬದಿ ವ್ಯಾಪಾರಸ್ಥರ ಸಂಘದಿಂದ ಮಂಗಳೂರಿನ ಟೌನ್ ಹಾಲ್ ಬಳಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರು ರಸ್ತೆ ತಡೆಗೆ ಮುಂದಾಗಿದ್ದು, ತಕ್ಷಣವೇ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.