ಉಡುಪಿ: ಭೀಮನ ಅಮಾವಾಸ್ಯೆ ದಿನ ಕುಡಿದ ಮತ್ತಿನಲ್ಲಿ ಪತ್ನಿಯ ಕತ್ತು ಕೊಯ್ದ ಪತಿರಾಯ

ಭೀಮನ ಅಮಾವಾಸ್ಯೆ ದಿನ ಪತ್ನಿಯ ಕುತ್ತಿಗೆ ಕಡಿದು, ಪತಿಯು ನರ್ತಿಸಿದ್ದಂತಹ ಮೈ ಜುಮ್ ಎನಿಸುವ ಘಟನೆಯೂ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರು ನಲ್ಲಿ ನಡೆದಿದೆ. ಬಸ್ರೂರು ಕಾಶಿ ಮಠ, ರೆಸಿಡೆನ್ಶಿಯಲ್ ಬ್ಲಾಕ್ ನ ಬಾಡಿಗೆ ಮನೆಯಲ್ಲಿ ಈ ಘಟನೆಯೂ ನಡೆದಿದ್ದು ಅನಿತಾ (38) ಗಂಡನಿಂದ ಮಾರಣಾಂತಿಕ ಹಲ್ಲೆಗೊಳಗಾದವರು ಎನ್ನಲಾಗಿದೆ.
ಕಳೆದ ನಾಲ್ಕು ತಿಂಗಳ ಹಿಂದೆ ಕಾಶಿಮಠದ ತೋಟವನ್ನು ನೋಡಿಕೊಳ್ಳಲೆಂದು ಸೊರಬ ತಾಲೂಕು ಮೂಲದ ಲಕ್ಷ್ಮಣ ಮತ್ತು ಅನಿತಾ ದಂಪತಿಗಳು ಉಡುಪಿ ಜಿಲ್ಲೆಗೆ ಬಂದಿದ್ದರು. ಆದರೆ ನಿನ್ನೆ ರಾತ್ರಿ ಕುಡಿದ ಮತ್ತಿನಲ್ಲಿದ್ದ ಪತಿ ಲಕ್ಷ್ಮಣಯೂ ಪತ್ನಿಯ ಕುತ್ತಿಗೆ ಕಡಿದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ.
ಹಲ್ಲೆಗೊಳಗಾದ ಅನಿತಾ ಅಡುಗೆ ಕೋಣೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದು ಇತ್ತ ಪತಿ ಲಕ್ಷ್ಮಣನು ಮನೆಯ ಬಾಗಿಲು ಲಾಕ್ ಮಾಡಿಕೊಂಡು ಹಾಲ್ ನಲ್ಲಿ ಕೈಯಲ್ಲಿ ಕತ್ತಿ ಹಿಡಿದು ವಿಚಿತ್ರವಾಗಿ ನರ್ತಿಸುತ್ತಿದ್ದ ಎನ್ನಲಾಗಿದೆ. ಈ ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳೀಯರು ಓಡೋಡಿ ಬಂದಿದ್ದಾರೆ. ಮೊದಲಿಗೆ ಮನೆಯ ಕಿಟಕಿ ಒಡೆದು ಅಡುಗೆ ಕೋಣೆಯಲ್ಲಿ ರಕ್ತ ಮಡುವಿನಲ್ಲಿ ಬಿದ್ದಿದ್ದ ಅನಿತಾಳನ್ನು ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಇತ್ತ ಘಟನೆ ನಡೆದ ಸ್ಥಳಕ್ಕೆ ಬಂದ ಬಂದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಪರಿಸ್ಥಿತಿ ಹತೋಟಿಗೆ ತರಲು ಹರ ಸಾಹಸ ಪಟ್ಟಿದ್ದಾರೆ. ಒಂದು ಗಂಟೆಯ ಬಳಿಕ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧ ಪಟ್ಟಂತೆ ಕಂಡ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.