ಮೂಡುಬಿದಿರೆ : ಸೌತ್ ಕೆನರಾ ಫೊಟೊಗ್ರಾಫರ್ಸ್ ಅಸೋಸಿಯೇಷನ್ ವಾರ್ಷಿಕ ಸಭೆ
ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ನ ವಾರ್ಷಿಕ ಸಭೆಯು ಜು. 30 ರಂದು ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಿತು. ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಧ್ಯಕ್ಷ ಪದ್ಮ ಪ್ರಸಾದ್ ಜೈನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಮೂಡುಬಿದಿರೆ ವಲಯದ ಅಧ್ಯಕ್ಷ ರಾಜೇಶ್ ಎಸ್. ಅಮೀನ್ ಅಧ್ಯಕ್ಷತೆ ವಹಿಸಿದ್ದರು.
ಮೂಡುಬಿದಿರೆ ವಲಯದ ಹದಿನಾಲ್ಕನೇ ವಾರ್ಷಿಕ ಸಭೆಯಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ದ ಕ., ಉಡುಪಿ ಜಿಲ್ಲಾ ಸಂಚಾಲಕರು ಕರುಣಾಕರ ಕಾನಂಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ್ ಬಂಟ್ವಾಳ, ಜಿಲ್ಲಾ ಉಪಾಧ್ಯಕ್ಷರು ರಮೇಶ್ ಕಲಾಶ್ರೀ, ಜಿಲ್ಲಾ ಛಾಯಾ ಕಾರ್ಯದರ್ಶಿ ರವಿ ಕೋಟ್ಯಾನ್, ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ದ ಕ.
ಉಡುಪಿ ಜಿಲ್ಲಾ ವಿವಿದೋದ್ದೇಶ ಸಹಕಾರಿ ಸಂಘದ ನಿರ್ದೇಶಕ ರಾಮ ಕೋಟ್ಯಾನ್, ಜಿಲ್ಲಾ ಕಟ್ಟಡ ಸಮಿತಿಯ ಪ್ರತಿನಿಧಿ ವಿಲ್ಫ್ರೆಡ್ ಮೆಂಡೋನ್ಸಾ, ಗೌರವಾಧ್ಯಕ್ಷ ಸುಂದರ ಸಾಲ್ಯಾನ್, ಕೋಶಾಧಿಕಾರಿ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕೆ, ಕೋಶಾಧಿಕಾರಿ ರಂಜಿತ್ ಕೋಟ್ಯಾನ್ ಸೇರಿದಂತೆ ಸದಸ್ಯರು ಉಪಸ್ಥಿತರಿದ್ದರು