ಧರ್ಮಸ್ಥಳಕ್ಕೆ ಭೇಟಿ ನೀಡಿದ ನಟ ಯಶ್, ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್ಗೂ ಮುನ್ನ ದೇವರ ದರ್ಶನ

ಖ್ಯಾತ ನಟ ಯಶ್ ಇಂದು ಪತ್ನಿ ರಾಧಿಕಾ ಜತೆಗೆ ದಕ್ಷಿಣ ಕನ್ನಡದ ಪುಣ್ಯ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ತಮ್ಮ ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್ಗೂ ಮುನ್ನ ದೇವರ ದರ್ಶನ ಪಡೆದಿದ್ದಾರೆ. ಮಂಜುನಾಥ ಸ್ವಾಮಿಯ ದರ್ಶನಕ್ಕೆ ರಾಖಿ ಬಾಯ್ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಂದಿದ್ದಾರೆ. ಜತೆಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಗೂ ವಿಡಿಯೋ ವೈರಲ್ ಆಗಿದೆ.
ಯಶ್ ‘ಟಾಕ್ಸಿಕ್’ ಸಿನಿಮಾದಲ್ಲಿ ಬ್ಯೂಸಿಯಾಗಿದ್ದು, ಸಿನಿಮಾದ ಕೆಲಸ ಪ್ರಾರಂಭಿಸುವುದಕ್ಕೂ ಮುನ್ನ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲು ಮುಂದಾಗಿದ್ದಾರೆ. ಇನ್ನು ಅವರು ಸಂಪ್ರದಾಯದಂತೆ ಪಂಚೆ ಉಟ್ಟು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದು ಇಳಿದಿದ್ದಾರೆ.
ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ನಂತರ ಮಂಜುನಾಥ ಸ್ವಾಮೀಯ ದರ್ಶನ ಪಡೆದಿದ್ದಾರೆ. ಇನ್ನು ವೀರೇಂದ್ರ ಹೆಗ್ಗಡೆ ಭೇಟಿ ವೇಳೆ ಇಬ್ಬರು ಕೂಡ ಮಾತುಕತೆ ನಡೆಸಿದ್ದಾರೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.