ಮೂಡುಬಿದಿರೆ: ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ವಿದ್ಯಾಗಿರಿ ಸಮೀಪದ ಗಾಂಧಿನಗರ ಎಂಬಲ್ಲಿ ಗುರುವಾರ ಮುಂಜಾನೆ ಟಿಪ್ಪರ್ ಲಾರಿಯೊಂದು ಬಸ್ಗೆ ಡಿಕ್ಕಿ ಹೊಡೆದಿದೆ.

ಮಂಗಳೂರು ಕಡೆಯಿಂದ ಮೂಡುಬಿದಿರೆ ಬರುತ್ತಿದ್ದ ಟಿಪ್ಪರ್ ಓವರೆಟೆಕ್ ಮಾಡಲು ಯತ್ನಿಸುತ್ತಿದ್ದ ಬೈಕ್ ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಯತ್ನಿಸುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮೂಡುಬಿದಿರೆಯಿಂದ ಮಂಗಳೂರಿನ ಕಡೆಗೆ ಹೋಗುತ್ತಿದ್ದ ಖಾಸಗಿ ಎಕ್ಸಪ್ರೆಸ್ ಬಸ್ಗೆ ಡಿಕ್ಕಿ ಹೊಡೆದಿದೆ. ಟಿಪ್ಪರ್ ಅನ್ನು ಅಪಘಾತದಿಂದ ತಪ್ಪಿಸುವ ಪ್ರಯತ್ನದಲ್ಲಿರುವ ಟಿಪ್ಪರ್ನ ಮುಂಬಾಗ ಬಲಗಡೆಯ ಚಕ್ರ ಸ್ಪೋಟಗೊಂಡಿದೆ. ಟಿಪ್ಪರ್ ಹಾಗೂ ಬಸ್ನ ಮುಂಬಾಗದ ಬಲಗಡೆ ಜಖಂಗೊಂಡಿದೆ. ಬಸ್ನಲ್ಲಿದ್ದ ಶಿಕ್ಷಕಿಯೊಬ್ಬರಿಗೆ ಅಲ್ಪಸ್ವಲ್ಪ ಗಾಯವಾಗಿದೆ. ಘಟನೆಯಿಂದ ರಾಷ್ಟ್ರೀಯಲ್ಲಿ ಸಂಚರಿಸುವ ವಾಹನಗಳಿಗೆ ಹೋಗಲು ತೊಂದರೆಯಾಗಿತ್ತು ಮಾಸ್ತಿಕಟ್ಟೆ-ವಿದ್ಯಾಗಿರಿ ರಸ್ತೆಯಲ್ಲಿ ಪಯರ್ಾಯ ವ್ಯವಸ್ಥೆ ಮೂಲಕ ಹೆಚ್ಚಿನ ವಾಹನಗಳು ಸಂಚರಿಸಿತು. ಮೂಡುಬಿದರೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.







