ಮಂಗಳೂರು: ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣದ ಎಲ್ಲಾ 39 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಮಂಗಳೂರು: 2012 ರಲ್ಲಿ ಭಾರೀ ಸದ್ದು ಮಾಡಿದ್ದ ಮಂಗಳೂರಿನ ಹೋ ಸ್ಟೇ ಮೇಲಿನ ದಾಳಿ ಪ್ರಕರಣದ ಎಲ್ಲಾ ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. 12 ವರ್ಷಗಳ ಹಿಂದೆ ಅಂದರೆ 2012 ರ ಜುಲೈ 28 ರಂದು ಪಡೀಲ್ ಬಳಿಯ ಮಾರ್ನಿಂಗ್ ಮಿಸ್ಟ್ ಹೋಂ ಸ್ಟೇ ಮೇಲೆ ದಾಳಿ ನಡೆದಿತ್ತು. ಯುವಕ ಯುವತಿಯರು ಹೋಂ ಸ್ಟೇನಲ್ಲಿ ಅನೈತಿಕ ಚಟುವಟಿಕೆಯಲ್ಲಿ ಭಾಗಿಯಾಗಿದ್ದರು ಎಂದು ಆರೋಪಿಸಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಬರ್ತ್ ಡೇ ಪಾರ್ಟಿಯ ವೇಳೆ ದಾಳಿ ನಡೆಸಿದ್ದರು ಎಂದು ಆರೋಪಿಸಲಾಗಿದ್ದು. ಈ ಸಂಬಂಧ 44 ಮಂದಿ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿತ್ತು.
ಇದೀಗ ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದಾರೆ. ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಪ್ರಕರಣದ ಎಲ್ಲಾ 40 ಆರೋಪಿಗಳನ್ನು ದೋಷಮುಕ್ತಗೊಳಿಸಿ ಎಂಬ ತೀರ್ಪು ನೀಡಿದೆ. ಪ್ರಕರಣದಲ್ಲಿ ಒಟ್ಟು 44 ಆರೋಪಿಗಳ ಪೈಕಿ ಮೂವರು ಸಾವನ್ನಪ್ಪಿದ್ದರು. ಓರ್ವ ಪತ್ರಕರ್ತ ನವೀನ್ ಸೂರಿಂಜೆ ವಿರುದ್ಧದ ಪ್ರಕರಣವನ್ನು ನ್ಯಾಯಾಲಯ ಕೈಬಿಟ್ಟಿತ್ತು. ಇದೀಗ ಪ್ರಕರಣದ ಸಾಕ್ಷಾಧಾರಗಳ ಕೊರತೆಯಿಂದ ಆರೋಪಿಗಳನ್ನು ಖುಲಾಸೆಗೊಳಿಸಿ ಎಂದು ನ್ಯಾ. ಕಾಂತರಾಜು ಅವರಿದ್ದ ಏಕಸದಸ್ಯ ಪೀಠ ಮಂಗಳವಾರ (ಆ.8) ಆದೇಶ ಹೊರಡಿಸಿದೆ.