ವಗ್ಗ ವಲಯದ ಶೌರ್ಯ ಘಟಕದಿಂದ ಆಹಾರ ಕಿಟ್ ವಿತರಣೆ
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ವಗ್ಗ ವಲಯದ ಶೌರ್ಯ ಘಟಕ ವತಿಯಿಂದ ಸಮಾಜದಲ್ಲಿ ತೀರಾ ನಿರ್ಗತಿಕ ಮೂರು ಕುಟುಂಬಗಳನ್ನು ಗುರುತಿಸಿ ಆಹಾರ ಸಾಮಗ್ರಿಗಳ ಕಿಟ್ಟನ್ನು ವಿತರಿಸಲಾಯಿತು.
ಸಂದರ್ಭದಲ್ಲಿ ಯೋಚನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ, ವಗ್ಗ ವಲಯದ ಮೇಲ್ವಿಚಾರಕರಾಕಿ ಸವಿತಾ, ಶೌರ್ಯ ಘಟಕದ ಸಂಯೋಜಕಿ ರೇಖಾ ಪಿ, ಘಟಕ ಪ್ರತಿನಿಧಿ ಪ್ರವೀಣ್, ಸಂಪತ್ ಶೆಟ್ಟಿ, ಮಹಾಬಲ ರೈ, ನಾರಾಯಣಶೆಟ್ಟಿ, ಆನಂದ, ಅಶೋಕ ಹಾರೊದ್ದು, ರೋಹಿತ್, ಪ್ರಿಯಾಂಕ, ಅಶೋಕ ಮತ್ತಿತರಿದ್ದರು.