ನೀಲಕಂಠೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಾಗರ ಪಂಚಮಿ
ಕೈಕಂಬ:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭ್ರಮದ ನಾಗರ ಪಂಚಮಿ ಹಲವು ದೇವಸ್ಥಾನಗಳಲ್ಲಿ ನಾಗರ ಪಂಚಮಿಯನ್ನು ವಿಶೇಷವಾಗಿ ಅದ್ಧೂರಿಯಾಗಿ ನಡೆಸುತ್ತಿದ್ದಾರೆ.
ನಾಗ ದೇವರನ್ನು ಕರಾವಳಿಯಲ್ಲಿ ಶ್ರದ್ಧ ಭಕ್ತಿಯಿಂದ ಪೂಜಿಸುತ್ತಾರೆ. ಇಲ್ಲಿಯ ಕಂದಾವರ ನೀಲಕಂಠೇಶ್ವರ ಮಹಾಗಣಪತಿ ದೇವಸ್ಥಾನದ ನಾಗವನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ವಿಶೇಷ ಪೂಜೆ ನಡೆಯಿತು.