ಗುಡ್ಡ ಕುಸಿತದಿಂದ ತತ್ತರಿಸಿದ ವಯನಾಡಿಗೆ ಭೇಟಿ ನೀಡಿ ವೈಮಾನಿಕ ಸಮೀಕ್ಷೆ ನಡೆಸಿದ ಮೋದಿ
ವಯನಾಡಿನ ಭೀಕರ ಭೂಕುಸಿತದಲ್ಲಿ ಅನೇಕರು ನಾಪತ್ತೆಯಾಗಿದ್ದು, ಹಲವು ಮಂದಿ ಸಾವನ್ನಪ್ಪಿದ್ದಾರೆ. ತನ್ನ ಕುಟುಂಬದವರನ್ನು ಕಳೆದುಕೊಂಡು ಅನೇಕರು ಅನಾಥರಾಗಿದ್ದಾರೆ. ಈ ಭೂಕುಸಿತದಿಂದ ತತ್ತರಿಸಿ ಹೋಗಿರುವ ವಯನಾಡಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದರು.
ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಮೋದಿ ಅವರ ವಿಮಾನ ಕಣ್ಣೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ವೇಳೆಯಲ್ಲಿ ಮೋದಿ ಅವರನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಕೇಂದ್ರ ಪೆಟ್ರೋಲಿಯಂ ಮತ್ತು ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ಸ್ವಾಗತಿಸಿದರು.
ಆ ಬಳಿಕ ನರೇಂದ್ರ ಮೋದಿ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೇರಳ ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ಮತ್ತು ಇತರ ಗಣ್ಯರೊಂದಿಗೆ ವಯನಾಡಿಗೆ ತೆರಳಿದರು. ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಭೂಕುಸಿತಕ್ಕೆ ಒಳಗಾದ ವಯನಾಡಿನ ಚೂರಲ್ ಮಾಲಾ, ಮುಂಡಕ್ಕೈ ಹಾಗೂ ಪುಂಚಿರಿಮಟ್ಟಂ ಗ್ರಾಮಗಳ ವೈಮಾನಿಕ ಸಮೀಕ್ಷೆ ನಡೆಸಿದರು.